ಸಿಎಂ ಹುಟ್ಟುಹಬ್ಬ; ವಿವಿಧ ಕಾರ್ಯಕ್ರಮ
ಕೆ.ಆರ್. ನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 66ನೇ ಹುಟ್ಟುಹಬ್ಬದ ಅಂಗವಾಗಿ ಆ.12 ರಂದು ಪಟ್ಟಣದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ವಿವಿಧ ಸೇವಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಹಳೆಯಡತೊರೆಯ ಅರ್ಕೇಶ್ವರಸ್ವಾಮಿ ದೇವಸ್ಥಾನದಲ್ಲಿ ಮುಖ್ಯಮಂತ್ರಿಗಳ ಹೆಸರಿನಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು- ಹಂಪಲು ವಿತರಣೆ, ಉಪ ಕಾರಾಗೃಹದಲ್ಲಿರುವ ಕೈದಿಗಳಿಗೆ ಸಿಹಿ ವಿತರಿಸಲಾಗುವುದು. ಮುಖಂಡರಾದ ದೊಡ್ಡಸ್ವಾಮೇಗೌಡ, ಅನುರಾಧಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಪಿ. ಆನಂದ್, ಬಿ.ಎಲ್. ರಾಜಶೇಖರ್, ತಾಲೂಕು ಕುರುಬರ ಅಧ್ಯಕ್ಷ ಜಿ.ಎನ್. ಮಲ್ಲೇಗೌಡ, ಡಿ. ರವಿಶಂಕರ್, ಮಾರ್ಚಳ್ಳಿ ಶಿವರಾಮ್, ಜಿ.ಆರ್. ರಾಮೇಗೌಡ, ತಾಪಂ ಮಾಜಿ ಅಧ್ಯಕ್ಷೆ ಜ್ಯೋತಿ ಬಸವರಾಜ್, ಪರಸಭಾ ಮಾಜಿ ಅಧ್ಯಕ್ಷ ತಮ್ಮ ನಾಯಕ, ರಿಜ್ವಾನ್ ಉಲ್ಲಾ ಖಾನ್ ಭಾಗವಹಿಸುವರು.
ಎಚ್.ಡಿ. ಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ 66ನೇ ಹುಟ್ಟುಹಬ್ಬದ ಅಂಗವಾಗಿ ತಾಲೂಕು ಕುರುಬ ಸಂಘದ ವತಿಯಿಂದ ಆ.12ರ ಬೆಳಗ್ಗೆ 10ಕ್ಕೆ ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆ ಹಾಗು ಸೆಂಟ್ ಮೇರಿಸ್ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಶಿವಪ್ಪ ಕೋಟೆ ತಿಳಿಸಿದ್ದಾರೆ.
ಮರಳುಗಾರಿಕೆಮೇಲೆ ದಾಳಿ
ಎಚ್.ಡಿ. ಕೋಟೆ: ತಾಲೂಕಿನ ಇಟ್ನ ಗ್ರಾಮದ ಕಪಿಲಾ ಹೊಳೆ ದಂಡೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಮೇಲೆ ತಹಸೀಲ್ದಾರ್ ಕೃಷ್ಣ ದಾಳಿ ನಡೆಸಿ, ಮರಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.ಇಟ್ನ ಗ್ರಾಮದ ಕಪಿಲಾ ಹೊಳೆಯಲ್ಲಿ ನಿರಂತರವಾಗಿ ಮರಳನ್ನು ಸಂಗ್ರಹಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪಡೆದ ತಹಸೀಲ್ದಾರ್ ಕೃಷ್ಣ ಶನಿವಾರ ದಾಳಿ ನಡೆಸಿದರು. ಹೊಳೆಯ ಪಕ್ಕದಲ್ಲಿ ಮಾರಾಟಕ್ಕಾಗಿ ಸಿದ್ದಪಡಿಸಿದ್ಧ ಸುಮಾರು 60ಕ್ಕೂ ಹೆಚ್ಚು ಟ್ರ್ಯಾಕ್ಟರ್ ಮರಳನ್ನ ವಶಕ್ಕೆ ಪಡೆದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಹಸ್ತಾಂತರಿದರು.
ಸಣ್ಣಮ್ಮ ನಿಧನ
ಕೆ.ಆರ್. ನಗರ: ಪಟ್ಟಣದ ಸಾರಿಗೆ ನರಗದ ನಿವಾಸಿ ಸಣ್ಣಮ್ಮ (85) ಭಾನುವಾರ ನಿಧನರಾದರು. ಮೃತರಿಗೆ ಕಂಡಕ್ಟರ್ ಗೋವಿಂದೇಗೌಡ ಸೇರಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯೆ ಸ್ವಗ್ರಾಮ ಪಿರಿಯಾಪಟ್ಟಣದ ಚಪ್ಪರದಹಳ್ಳಿಯಲ್ಲಿ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

