15 ರಂದು ಜೈಹಿಂದ್ ಕವಿಗೋಷ್ಠಿ
ಕ.ಪ್ರ.ವಾರ್ತೆ ಮೈಸೂರು ಆ. 12
ಹೊಯ್ಸಳ ಕನ್ನಡ ಸಂಘ ಮತ್ತು ಸವಿಗನ್ನಡ ಬಳಗದ ಆಶ್ರಯದಲ್ಲಿ ಆ.15 ರಂದು ಜೆ.ಪಿ. ನಗರದ ಕನ್ನಡಗುಡಿಯಲ್ಲಿ ಜೈಹಿಂದ್ ಕವಿಗೋಷ್ಠಿ ಮತ್ತು ಬಹುಮಾನ ವಿತರಣೆ ಆಯೋಜಿಸಲಾಗಿದೆ.
ಅಂದು ಸಂಜೆ 4ಕ್ಕೆ ಸಮಾಜ ಸೇವಕ ಕೆ.ರಘುರಾಂ ಉದ್ಘಾಟಿಸಲಿದ್ದು, ಸಾಹಿತಿ ಪ್ರೊ.ಕೆ. ಭೈರವಮೂರ್ತಿ ಅವರು ಗಾಂಧೀಜಿ ಮತ್ತು ಜೀವನ ಮೌಲ್ಯಗಳು ಕುರಿತಂತೆ ಉಪನ್ಯಾಸ ನೀಡುವರು. ಮುಕ್ತಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಸ್. ರಾಮಪ್ರಸಾದ್, ಲೇಖಕಿ ಶಾಂತಾ ವೆಂಕಟರಾಮು ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಧಾನ ಕಾರ್ಯದರ್ಶಿ ರಂಗನಾಥ್ ಮೈಸೂರು ತಿಳಿಸಿದ್ದಾರೆ.
ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆಸಲಾದ ದೇಶಭಕ್ತಿ ಗೀತಗಾಯನ ಸ್ಪರ್ಧೆಯ ಕಿರಿಯರ ವಿಭಾಗದಲ್ಲಿ ಬಿಂಬ ಪ್ರಥಮ, ಶಿವಾನಿ ದ್ವಿತೀಯ, ಎಂ.ಆರ್. ಆದಿತ್ಯರಾಮನ್ ತೃತೀಯ, ಆರ್. ಸುಹಾಸ್ ಸಮಾಧಾನಕರ ಹಾಗೂ ಹಿರಿಯರ ವಿಭಾಗದಲ್ಲಿ ಗೋದಾವರಿ ಪ್ರಥಮ, ಸುಮನ್ ದ್ವಿತೀಯ ಬಹುಮಾನ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

