ಬೇಡಿಕೆ ಈಡೇರಿಕೆಗೆ ನಾಯಕರ ಯುವ ಸೇನೆ ಪ್ರತಿಭಟನೆ
ಕ.ಪ್ರ.ವಾರ್ತೆ ಮೈಸೂರು ಆ. 12
ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ನಾಯಕರ ಯುವಸೇನೆಯವರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟಿಸಿದರು.
ನಾಯಕ ಜನಾಂಗಕ್ಕೆ ಶೇ.7.5 ಮೀಸಲಾತಿ ಒದಗಿಸಬೇಕು. ಮಂದಗತಿಯಲ್ಲಿ ಸಾಗುತ್ತಿರುವ ವಾಲ್ಮೀಕಿ ಭವನ ನಿರ್ಮಾಣ ಕಾಮಗಾರಿ ಚುರುಕುಗೊಳಿಸಬೇಕು, ಹೆಚ್ಚುವರಿಯಾಗಿ 5 ಕೋಟಿ ಬಿಡುಗಡೆ ಮಾಡಬೇಕು. ಯಾವುದೇ ಬಲವಾದ ಕಾರಣವಿಲ್ಲದೆ ಕೈಬಿಡಲಾಗಿರುವ ಪರಿವಾರ, ತಳವಾರ ಹಾಗೂ ಪಾಳೆಗಾರರ ನಾಮಾಂಕಿತನ ಎಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಅವರು ಒತ್ತಾಯಿಸಿದರು.ನಿಗಮ, ಮಂಡಳಿಗೆ ನಾಯಕ ಜನಾಂಗದ ಮುಖಂಡರನ್ನು ನೇಮಿಸಬೇಕು. ಬೆಂಗಳೂರಿನಲ್ಲಿ ವಾಲ್ಮೀಕಿ ಭವನ ನಿರ್ಮಿಸಬೇಕು. ಜಿಲ್ಲಾ ಕೇಂದ್ರಗಳಲ್ಲಿ ವಾಲ್ಮೀಕಿ ವಸತಿ ಶಾಲೆಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿದರು.
ಸೇನೆಯ ರಾಜ್ಯಾಧ್ಯಕ್ಷ ದೇವರಾಜ್ ಟಿ. ಕಾಟೂರ್, ಮುಖಂಡರಾದ ಬೋಗಾದಿ ಮಹೇಶ, ವಿನಯ್ಕುಮಾರ್, ವೀರಣಗೌಡ, ಕಡಕೊಳ ಕುಮಾರಸ್ವಾಮಿ, ರಮ್ಮನಹಳ್ಳಿ ನಾಗರಾಜು, ಮೆಲ್ಲಹಳ್ಳಿ ಶಂಕರ್, ಟಿ.ಎಲ್. ಸ್ವಾಮಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

