ಮೈಸೂರು

ಪಿರಿಯಾಪಟ್ಟಣದಲ್ಲಿ ನವಜಾತ ಶಿಶು ಪತ್ತೆ

Published On :

ಕ.ಪ್ರ.ವಾರ್ತೆ    ಪಿರಿಯಾಪಟ್ಟಣ    ಆ. 13
ಆಗ ತಾನೆ ಜನಿಸಿದ ಹೆಣ್ಣು ಶಿಶುವೊಂದನ್ನು ಪೊದೆಯೊಳಗೆ ಬಿಸಾಡಿ ಹೋಗಿರುವ ಘಟನೆ ಇಲ್ಲಿನ ನ್ಯಾಯಾಲದ ಹೊರಾವರಣದ ಮೈದಾನದಲ್ಲಿ ನಡೆದಿದೆ.
ಪಪಂ ನೌಕರರು ಬೆಳಗ್ಗೆ 7ರ ಸಮಯದಲ್ಲಿ ಸ್ವಚ್ಛಗೊಳಿಸುತ್ತಿದ್ದ ಸಂದರ್ಭದಲ್ಲಿ ಮುಳ್ಳಿನ ಪೊದೆಯಲ್ಲಿ ನಾಯಿ ಮರಿಯ ಶಬ್ದವೆಂದು ಆಲಿಸಿದ ನೌಕರ ರವಿ, ಪೊದೆಯೊಳಗೆ ನೋಡಿದಾಗ ಹೆಣ್ಣು ಮಗು ಗೋಚರವಾದಾಗ ಮಗುವನ್ನು ಸುರಕ್ಷಿತವಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು.
ಮಗು ವಿಪರೀತ ಶೀತದಿಂದ ಬಳಲುತ್ತಿದ್ದರಿಂದ ವಾರ್ಮಾರ್ ಯಂತ್ರದಲ್ಲಿ ಇಟ್ಟು ಚಿಕಿತ್ಸೆ ನೀಡಲಾಯಿತು.
ವಿಷಯ ತಿಳಿದು ಆಸ್ಪತ್ರೆಗೆ ತಹಸೀಲ್ದಾರ್ ಎಂ.ಕೆ. ಸವಿತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ದೇವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಗು ದೊರೆತ ಸ್ಥಳದಲ್ಲಿ ಪಪಂ ನೌಕರರಿಂದ ಈ ಬಗ್ಗೆ ಮಾಹಿತಿ ಪಡೆದು, ಈ ಬಗ್ಗೆ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ತ್ರಿವೇಣಿ ಅವರಿಗೆ ಪೊಲೀಸ್ ಠಾಣೆಗೆ ದೂರು ನೀಡುವಂತೆ ಸೂಚಿಸಿದರು.
ತಹಸಿಲ್ದಾರ್ ಎಂ.ಕೆ. ಸವಿತಾ ಮಾತನಾಡಿ, ಮಗುವಿಗೆ ಈಗಾಗಲೇ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಕಾನೂನು ವ್ಯಾಪ್ತಿಯಲ್ಲಿ ಕ್ರಮ ಕೈಗೊಂಡು ಸಂಬಂಧಪಟ್ಟ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುಪರ್ದಿಗೆ ನೀಡಿದ್ದು, ಮಗುವನ್ನು ಮೈಸೂರಿನ ಬಾಪೂಜಿ ಮಕ್ಕಳ ಸಂಸ್ಥೆಗೆ ಒಪ್ಪಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.