ದಸರಾ ಮಹೋತ್ಸವಕ್ಕೆ ಸಿದ್ಧತೆ ಶುರು
ಕ.ಪ್ರ.ವಾರ್ತೆ ಮೈಸೂರು ಆ. 14
ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಈ ಬಾರಿ ಅ. 5 ರಿಂದ 14 ರವರೆಗೆ ನಡೆಯಲಿದ್ದು, ಇದಕ್ಕೆ ಸಂಬಂಧಿಸಿದಂತೆ ಈ ಸಿದ್ಧತೆಗೆ ಚಾಲನೆ ನೀಡಲಾಗಿದೆ ಎಂದು ದಸರಾ ವಿಶೇಷಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಿ. ಶಿಖಾ ಹೇಳಿದ್ದಾರೆ.
ದಸರಾ ಉನ್ನತ ಮಟ್ಟದ ಸಮಿತಿ ಸಭೆಯು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದಿದ್ದು, ಈ ವರ್ಷದ ದಸರಾ ಆಚರಣೆ ಬಗ್ಗೆ ವಿಸ್ತಾರವಾಗಿ ಚರ್ಚಿಸಲಾಗಿದೆ. ದಸರಾ ಆಚರಣೆಗೆ 10 ಕೋಟಿ ನೀಡಲು ಸಮ್ಮತಿಸಿದೆ. ದಸರಾ ಸಮಯದಲ್ಲಿ ಮೈಸೂರಿಗೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯತಿ ನೀಡಲೂ ಸಭೆಯಲ್ಲಿ ಒಪ್ಪಲಾಗಿದೆ.
ಯುವ ದಸರಾ ಆಚರಣೆ ಕಳೆದ ವರ್ಷ ಬರಗಾಲದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಿದ್ದು, ಈ ವರ್ಷ ಇದನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ಸಿದ್ಧತೆ ಆರಂಭವಾಗಿದೆ. ದಸರಾ ಉತ್ಸವಕ್ಕೆ ಸಂಬಂಧಿಸಿದ ಲೋಗೋ ಬಿಡುಗಡೆಗೊಳಿಸಿದೆ. ದಸರಾ ಆಚರಣೆಗಾಗಿ 20 ಉಪಸಮಿತಿ ರಚಿಸಲು ಉನ್ನತ ಮಟ್ಟದ ಸಮಿತಿ ಸಭೆ ನಿರ್ಧರಿಸಿದ್ದು, ಅದರಂತೆ ಅಧಿಕಾರಿಗಳನ್ನು 20 ಉಪಸಮಿತಿಗಳಿಗೆ ನೇಮಕ ಮಾಡಿ ಆದೇಶ ಹೊರಡಿಸಿದೆ. ಒಟ್ಟು 9 ಹಿರಿಯ ಅಧಿಕಾರಿಗಳು ದಸರಾ ಉಪವಿಶೇಷಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ 2 ರಿಂದ 3 ಉಪಸಮಿತಿಗಳ ಜವಾಬ್ದಾರಿ ನೀಡಲಾಗಿದೆ. ಪ್ರತಿ ಉಪಸಮಿತಿಗೆ ಒಬ್ಬರು ಕಾರ್ಯಾಧ್ಯಕ್ಷರು ಹಾಗೂ ಒಬ್ಬರು ಕಾರ್ಯದರ್ಶಿಗಳಾಗಿ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಇವರಿಗೆ ಈಗಾಗಲೇ ಆದೇಶ ನೀಡಲಾಗಿದ್ದು, ಅವರು ಕಾರ್ಯಪ್ರವೃತ್ತರಾಗಿದ್ದಾರೆ.
ಹಿಂದಿನ ವರ್ಷದಂತೆಯೆ ಕಾರ್ಯಕ್ರಮಗಳನ್ನು ಆಯೋಜಿಸಲು ಉಪಸಮಿತಿಗಳಿಗೆ ನಿರ್ದೇಶನ ನೀಡಲಾಗಿದೆ. ಕಳೆದ ವರ್ಷದ ವೆಚ್ಚಕ್ಕಿಂತ ಈ ಬಾರಿಯ ವೆಚ್ಚ ಅಧಿಕವಾಗದಂತೆಯೂ ಎಚ್ಚರ ವಹಿಸಲು ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

