ಮಹಿಳೆ ತಲೆಗೆ ಹೊಡೆದು ಪರಾರಿಯಾದ ಸರಗಳ್ಳ
ಕ.ಪ್ರ.ವಾರ್ತೆ ಹುಣಸೂರು ಆ. 14
ಮನೆ ಮುಂದೆ ಬಟ್ಟೆ ಒಣಗಲು ಹಾಕುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಅಪಹರಿಸಲು ಯತ್ನಿಸಿ ವಿಫಲವಾದ ಸರಗಳ್ಳನೊಬ್ಬ ಆಕೆಯ ತಲೆಗೆ ಕತ್ತಿಯಿಂದ ಹೊಡೆದು ಪರಾರಿಯಾಗಿರುವ ಘಟನೆ ಇಲ್ಲಿನ ದಾವಣಿ ಬೀದಿಯಲ್ಲಿ ಬುಧವಾರ ಮಧ್ಯಾಹ್ನ ಜರುಗಿದೆ.
ದಾವಣಿ ಬೀದಿಯ ನಿವಾಸಿ ಹೇಮಂತಕುಮಾರ್ ಎಂಬವರ ಪತ್ನಿ ಪ್ರತಿಭಾ (28) ತೀವ್ರ ಗಾಯಗೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬುಧವಾರ ಮಧ್ಯಾಹ್ನ ಪ್ರತಿಭಾ ತಮ್ಮ ಮನೆ ಮುಂದೆ ಬಟ್ಟೆ ಒಣಗಲು ಹಾಕುತ್ತಿದ್ದ ವೇಳೆ ಮುಖ್ಯ ರಸ್ತೆಯಲ್ಲೆ ಬೈಕ್ ನಿಲ್ಲಿಸಿಕೊಂಡು ಹೊಂಚು ಹಾಕುತ್ತಿದ್ದ ಆತ, ಹಿಂದಿನಿಂದ ಬಂದು ಸರಕ್ಕಾಗಿ ಕತ್ತಿಗೆ ಕೈ ಹಾಕಿದ ವೇಳೆ ಗಾಬರಿಗೊಂಡು ಕೂಗುತ್ತಿದ್ದಂತೆ ಬೆದರಿದ ಸರಗಳ್ಳ, ಆಕೆಯ ತಲೆಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಿದ್ದಿದ್ದ ಅವರನ್ನು ಬಡಾವಣೆಯ ನಿವಾಸಿಗಳು ನೋಡಿ ತಕ್ಷಣವೆ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

