ಮೈಸೂರು

'ಅಧಿಕಾರದ ಆಸೆಯಲ್ಲಿ ರೈತರನ್ನು ಮರೆತ ಮುಖ್ಯಮಂತ್ರಿ'

Published On :

ಟಿ. ನರಸೀಪುರ: ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಲೋಕಸಭಾ ಚುನಾವಣೆ ಮುಖ್ಯವಾದ್ದರಿಂದ ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ಕಣಿವೆಯ ರೈತರನ್ನೆ ಮರೆತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಟೀಕಿಸಿದರು. ತಾಲೂಕಿನ ತಲಕಾಡಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಮಾಧವಮಂತ್ರಿ ಅಣೆಕಟ್ಟೆ ಒಡೆದು ನೀರು ಪೋಲಾಗುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಭೇಟಿ ನೀಡಿ ಅಣೆಕಟ್ಟೆ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಸಿದ್ದರಾಮಯ್ಯ ಅವರಿಗೆ ಇಲ್ಲಿನ ಅಣೆಕಟ್ಟೆಯ ಬಗ್ಗೆಯಾಗಲಿ, ರೈತರ ಬಗ್ಗೆಯಾಗಲಿ ಕಾಳಜಿ ಇಲ್ಲ ಎಂದರು.
ರೈತರ ಬಗ್ಗೆ ಬಾಯಿ ಮಾತಿನ ಹೊಗಳಿಕೆಯೆ ಹೊರತು ನೈಜ ಕಳಕಳಿ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವರಿದ್ದರೂ ತಲಕಾಡಿಗೆ ಭೇಟಿ ನೀಡಿಲ್ಲ. ಇದು ಅವರ ಹೊಣೆಗಾರಿಕೆ ತೋರಿಸುತ್ತದೆ. ನಮ್ಮ ಬೇಡಿಕೆ ರೈತರಿಗೆ ನೀರು ಕೊಡಬೇಕು ಎಂಬುದೆ ಹೊರತು ಪರಿಹಾರ ನೀಡಬೇಕಿಲ್ಲ. ರೈತರ ಕೃಷಿ ಚಟುವಟಿಕೆ ನಾಲೆಗೆ ನೀರು ಪೂರೈಕೆ ಆಗಬೇಕು. ಅಣೆಕಟ್ಟೆಯ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಮಾಜಿ ಸಚಿವರಾದ ವಿ. ಸೋಮಣ್ಣ, ಎಸ್.ಎ. ರಾಮದಾಸ್, ವಿಧಾನ ಪರಿಷತ್ ಸದಸ್ಯ ಸಿದ್ದರಾಜು, ಮಾಜಿ ಸದಸ್ಯ ಸಿ. ರಮೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಹೇಮಂತ್‌ಕುಮಾರ್ ಗೌಡ, ಹಿರಿಯ ಮುಖಂಡ ಕರೋಹಟ್ಟಿ ಮಹದೇವಯ್ಯ, ತಾಪಂ ಸದಸ್ಯ  ಬಸವರಾಜು, ಬಿಜೆಪಿ ಕ್ಷೇತ್ರಾಧ್ಯಕ್ಷ ಬಸವರಾಜು, ಮಾಜಿ ಅಧ್ಯಕ್ಷ ತೋಟದಪ್ಪ ಬಸವರಾಜು, ಎಂ. ದಾಸಯ್ಯ, ಅನುರಾಗ್, ಕೆ.ಸಿ. ಲೋಕೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.