ಮೈಸೂರು

ಶುಚಿತ್ವಕ್ಕೆ ಗಮನ ನೀಡಲು ಆಗ್ರಹ

Published On :

ಎಚ್.ಡಿ. ಕೋಟೆ: ಆರೋಗ್ಯ ಇಲಾಖೆ ಮತ್ತು ಪಟ್ಟಣ ಪಂಚಾಯಿತಿ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಪಟ್ಟಣದ ಶುಚಿತ್ವದ ಬಗ್ಗೆ ಗಮನಹರಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಪಪಂ ಮಾಜಿ ಉಪಾಧ್ಯಕ್ಷೆ ಇಂದಿರಾರಾಜು ಅವರ ಎಚ್1ಎನ್1 ಜ್ವರದಿಂದ ಮೃತಪಟ್ಟ ಹಿನ್ನೆಲೆ, ಪಟ್ಟಣದ ಜನತೆಗೆ ತೀವ್ರ ಆತಂಕಗೊಂಡಿದ್ದು, ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ಶುಚಿತ್ವದ ಬಗ್ಗೆ ಗಮನಹರಿಸುವಂತೆ ಮನವಿ ಮಾಡಿದ್ದಾರೆ.
ವಾಹನ ಡಿಕ್ಕಿ: ಬಾಲಕ ಸಾವು
ಎಚ್.ಡಿ. ಕೋಟೆ: ಶಾಲೆ ಮುಗಿಸಿ ಸೈಕಲ್‌ನಲ್ಲಿ ಮನೆಗೆ ತೆರಳುತ್ತಿದ್ದ ಶಾಲಾ ಬಾಲಕನಿಗೆ ಟಾಟಾ ಸುಮೋ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ತಾಲೂಕಿನ ಎಚ್. ಹಂಪಾಪುರದ ಮೈಸೂರು- ಮಾನಂದವಾಡಿ ರಸ್ತೆಯಲ್ಲಿ ಬುಧವಾರ ಸಂಜೆ ಜರುಗಿದೆ. ಹಂಪಾಪುರ ಹೋಬಳಿ ಜಿನ್ನಹಳ್ಳಿ ಗ್ರಾಮದ ಸಿದ್ದನಾಯಕ ಎಂಬವರ ಪುತ್ರ ರೇವಣ್ಣ (14) ಮೃತಪಟ್ಟ ದುರ್ದೈವಿ. ಹೊಮ್ಮರಗಳ್ಳಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆತ ಸಂಜೆ ಶಾಲೆ ಬಿಟ್ಟ ನಂತರ ತನ್ನ ಗ್ರಾಮ ಜಿನ್ನಹಳ್ಳಿಗೆ ಸೈಕಲ್‌ನಲ್ಲಿ ತೆರಳುವಾಗ ಈ ಘಟನೆ ಸಂಭವಿಸಿದೆ. ಮೃತ ಬಾಲಕನ ಸಂಬಂಧಿಕರು ಸ್ಥಳದಲ್ಲಿಯೆ ಸ್ವಲ್ಪ ಸಮಯ ಪ್ರತಿಭಟಿಸಿದರು. ಸ್ಥಳಕ್ಕೆ ಎಸ್‌ಐ ಶಿವಮಾದಯ್ಯ ಭೇಟಿ ನೀಡಿ, ದೂರು ದಾಖಲಿಸಿಕೊಂಡಿದ್ದಾರೆ.    

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.