ಅಹಿಂಸಾ ಮಾರ್ಗದಲ್ಲಿ ಸ್ವಾತಂತ್ರ್ಯ ಪಡೆದ ಏಕೈಕ ದೇಶ ಭಾರತ
ಕ.ಪ್ರ.ವಾರ್ತೆ ಪಿರಿಯಾಪಟ್ಟಣ ಆ. 15
ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರ್ಯ ಪಡೆದ ಏಕೈಕ ರಾಷ್ಟ್ರ ಭಾರತ ಎಂದು ತಹಸೀಲ್ದಾರ್ ಎಂ.ಕೆ. ಸವಿತಾ ಹೇಳಿದರು.
ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಭಾರತದ ಸ್ವತಂತ್ರ ಸಂಗ್ರಾಮಕ್ಕೆ ತನ್ನದೇ ಆದ ಇತಿಹಾಸವಿದೆ. ಮಹಾತ್ಮಾಗಾಂಧಿ ಅವರಂತಹ ಅನೇಕ ಮಹನೀಯರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ. ಅವರಂತಹ ಮಹನೀಯರ ಆದರ್ಶ ಗುಣಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು. ಮಹನೀಯರ ಮಾರ್ಗದರ್ಶನ ಪಾಲಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದ್ದು, ಅವರಿಗೆಲ್ಲಾ ನಾವು ಚಿರಋಣಿಗಳು ಎಂದು ತಿಳಿಸಿದರು.
ಕೊಪ್ಪ ಭಾರತ ಮಾತಾ ಕಾಲೇಜಿನ ಉಪನ್ಯಾಸಕ ಜ್ಞಾನೇಶ್ ಮಾತನಾಡಿದರು. ಶಾಲಾ ಮಕ್ಕಳಿಂದ ದೇಶಭಕ್ತಿ ಸಾರುವ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಳೆದ ಸಾಲಿನಲ್ಲಿ ಅತಿ ಹೆಚ್ಚು ಅಂಕ ಪಡೆದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು ಹಾಗೂ ರಾಜ್ಯ ಮತ್ತು ಅಂತಾರಾಜ್ಯ ಮಟ್ಟದಲ್ಲಿ ಹೆಸರು ಮಾಡಿರುವ ಕ್ರೀಡಾಪಟು ಉಮಾ ಅವರನ್ನು ಸನ್ಮಾನಿಸಿತು.
ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ತಾಲೂಕು ಆಡಳಿತ ಭವನದ ಮುಂಭಾಗದಿಂದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದವರೆಗೆ ಶಾಲಾ ಮಕ್ಕಳಿಂದ ಶಿಸ್ತುಬದ್ಧ ಮೆರವಣಿಗೆ ಹಾಗೂ ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯಿತು.
ಇಒ ಕಾಂತರಾಜು, ಉಪನೋಂದಣಾಧಿಕಾರಿ ರವಿ, ಪಶುವೈದ್ಯಾಧಿಕಾರಿ ಡಾ. ಸದಾನಂದಪ್ಪ, ರೇಷ್ಮೆ ಇಲಾಖೆಯ ಹುಂಬಿ, ಎಇಇಗಳಾದ ಸಿ.ಸಿ. ಮನೋಹರ್, ಮಂಜುನಾಥ್, ಸಮಾಜ ಕಲ್ಯಾಣಾಧಿಕಾರಿ ನಾರಾಯಣ್, ಸಿಪಿಐ ವೆಂಕಟೇಶ್, ಆಹಾರ ನಿರೀಕ್ಷಕ ಗೋವಿಂದರಾಜು, ಆರ್ಎಫ್ಒ ಎಂ.ಎಸ್. ಚಿಣ್ಣಪ್ಪ, ಬಿಒ ರಾಮಲಿಂಗು, ಅಬಕಾರಿ ನಿರೀಕ್ಷಕ ಗಿರೀಶ್, ಸಿಡಿಪಿಓ ದೇವಕುಮಾರ್, ತಾಲೂಕು ವೈದ್ಯಾಧಿಕಾರಿ ಡಾ. ಶಶಿಕಲಾ, ಸರ್ಕಾರಿ ನೌಕರರ ಸಂಘದ ತಾ. ಅಧ್ಯಕ್ಷ ಎಂ.ಕೆ. ಪ್ರಕಾಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

