ಮೈಸೂರು

ಮಂಜುನಾಥ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ಸಂಭ್ರಮದ ದಿನಾಚರಣೆ

Published On :

ಕ.ಪ್ರ.ವಾರ್ತೆ   ಹುಣಸೂರು   ಆ. 15
ತಾಲೂಕಿನ ಸಂತೆಕೆರೆ ಕೋಡಿಯ ಮಂಜುನಾಥ ಶಿಕ್ಷಣ ಸಂಸ್ಥೆ ಅಧ್ಯಕ್ಷ ಗೌರಿಪುರ ಮಹದೇವ್ ಅವರು 67ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು.
ಶಿಕ್ಷಕರಾಗಿ ಉತ್ತಮ ಸೇವೆ ಸಲ್ಲಿಸಿ ಕೇಂದ್ರ ಸರ್ಕಾರದ ಅಂಚೆ ಇಲಾಖೆಯಲ್ಲಿ ನೌಕರಿ ಪಡೆದ ಮಂಜು ಅವರನ್ನು ಶಾಲೆ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ವಿದ್ಯಾಭಾರತಿ ಒಕ್ಕೂಟದ ಜಿಲ್ಲಾ ಮಟ್ಟದ ಕಬ್ಬಡಿ ಸ್ಪರ್ಧೆಯಲ್ಲಿ ಮಂಜುನಾಥ ವಿದ್ಯಾ ಸಂಸ್ಥೆ ವಿದ್ಯಾರ್ಥಿಗಳು ದ್ವೀತಿಯ ಬಹುಮಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಮತ್ತು ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಯಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು.
ಸಭೆಯಲ್ಲಿ ಕಾರ್ಯದರ್ಶಿ ಧರ್ಮಾಪುರ ನಾರಾಯಣ್, ಮುಖ್ಯ ಶಿಕ್ಷಕ ಕೆ.ಎಂ. ನಾಗೇಶ್, ರೋಟರಿ ಸಂಸ್ಥೆ ಮಾಜಿ ಅಧ್ಯಕ್ಷ ತಿಮ್ಮೇಗೌಡ, ದೈಹಿಕ ಶಿಕ್ಷಣ ಶಿಕ್ಷಕ ರೇವಣ್ಣ ಮಾತನಾಡಿದರು. ಶಿಕ್ಷಕಿ ಡಿ.ಕೆ. ಚೈತ್ರಾ ನಿರೂಪಿಸಿ, ಶಿಕ್ಷಕ ಜಲೇಂದ್ರಕುಮಾರ್ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.