ಮೈಸೂರು

ವಿಚ್ಛಿದ್ರಕಾರಿ ಶಕ್ತಿಗಳ ದಮನಕ್ಕೆ ಹೋರಾಟ ಅನಿವಾರ್ಯ

Published On :

ಕ.ಪ್ರ.ವಾರ್ತೆ   ಮೈಸೂರು   ಆ. 15
ಯಾವುದೇ ರೀತಿಯ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಟ ಅನಿವಾರ್ಯ ಎಂದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯ ನಿವೃತ್ತ ಹೆಚ್ಚುವರಿ ಕಾರ್ಯದರ್ಶಿ ಹಾಗೂ ಸಲಹೆಗಾರ ಸಿ.ವಿ. ಗೋಪಿನಾಥ್ ಹೇಳಿದರು.
ದಟ್ಟಗಳ್ಳಿಯ ಕೌಟಿಲ್ಯ ವಿದ್ಯಾಲಯ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ 67 ನೇ ಸ್ವಾಂತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ದೇಶವನ್ನು ಅಂತಾರಾಷ್ಟ್ರೀಯ ಮಟ್ಟದ ಮೇಲ್ಪಂಕ್ತಿಯ ಸಮಾನಕ್ಕೆ ಕೊಂಡೋಯ್ಯಲು ನಾವೆಲ್ಲರೂ ಪಣತೊಡಬೇಕು. ಅಲ್ಲದೆ ನಮ್ಮ ನಾಡನ್ನು ಅಂತರಿಕವಾಗಿ ಹಾಗೂ ಬಾಹ್ಯವಾಗಿ ದುರ್ಬಲಗೊಳಿಸುವ ಯಾವುದೇ ರೀತಿಯ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಅವಿರತವಾಗಿ ಹೋರಾಡಲು ಶ್ರಮ  ವಹಿಸಬೇಕು ಎಂದು ಕರೆ ನೀಡಿದರು.
ಸ್ವಾತಂತ್ರ್ಯ ಎಂಬುದಕ್ಕೆ ವಿಶಾಲವಾದ ಅರ್ಥವಿದ್ದರೂ ಸ್ವೇಚ್ಛಾಚಾರ ವರ್ತನೆಗಳು ಸ್ವಾತಂತ್ರ್ಯ ಎನಿಸಿಕೊಳ್ಳುವುದಿಲ್ಲ. ಸ್ವೇಚ್ಛಾಚಾರದ ವರ್ತನೆಗಳನ್ನು ಸ್ವಯಂ ನಿಯಂತ್ರಣ ಹಾಗೂ ಸ್ವಯಂ ಶಿಸ್ತು ಪಾಲನೆ ಮೂಲಕ ನಿಗ್ರಹಿಸಿ ಧರ್ಮಮಾರ್ಗದಲ್ಲಿ ನಡೆದಾಗ ಮಾತ್ರ ಸಮಾಜದಲ್ಲಿ ಆರೋಗ್ಯ ಪೂರ್ಣ ವಾತಾವರಣ ನಿರ್ಮಾಣವಾಗಲಿದೆ ಎಂದು ಹೇಳಿದರು.
ಲಕ್ಷಾಂತರ ದೇಶಪ್ರೇಮಿಗಳ ತ್ಯಾಗ, ಬಲಿದಾನದಿಂದ ಗಳಿಸಿರುವ ಸ್ವಾತಂತ್ರ್ಯ ಸಾರ್ಥಕವಾಗುವ ನಿಟ್ಟಿನಲ್ಲಿ ಸಂವಿಧಾನ ರೂಪಿಸಲಾಗಿದೆ. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕುಗಳನ್ನು ಒದಗಿಸಿರುವಂತೆ ನಿರ್ವಹಿಸಬೇಕಾದ ಕರ್ತವ್ಯಗಳನ್ನು ವಿವರಿಸಲಾಗಿದೆ. ಆದ್ದರಿಂದ ಪ್ರಾಮಾಣಿಕ ಕರ್ತವ್ಯ ಪ್ರಜ್ಞೆಯಿಂದ ಸಂವಿಧಾನದ ಆಶಯ ಈಡರಿಸಬೇಕು ಎಂದು ಆಶಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಆರ್. ರಘು ಮಾತನಾಡಿ, ಇಂದಿನ ಕಲುಷಿತ ರಾಜಕೀಯ ಹಾಗೂ ಸಾಮಾಜಿಕ ವ್ಯವಸ್ಥೆಯಲ್ಲಿ ಸ್ವಾತಂತ್ರ್ಯದ  ಪರಿಕಲ್ಪನೆ ಅರ್ಥ ಕಳೆದುಕೊಂಡಿದೆ. ಸಂಕುಚಿತ ಮನೋಭಾವ ಎಲ್ಲೆಡೆ ತಾಂಡವವಾಡುತ್ತಿದೆ. ದೇಶಪ್ರೇಮದ ಹಂಬಲವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಪ್ರಾಂಶುಪಾಲೆ ಡಾ.ಎಲ್. ಸವಿತಾ ಪ್ರಾಸ್ತಾವಿಕ ಮಾತುಗಳಾಡಿದರು. ವಿವಿಧ ವಿಭಾಗಗಳ ಮುಖ್ಯೋಪಾಧ್ಯಾಯರಾದ ಮಿನಲ ಸತ್ಯಮೂರ್ತಿ, ಬಿ.ಬಿ. ರಾಧಿಕಾ, ನಿವೇದಿತಾ ನಾಗೇಶ್ ಇದ್ದರು. ನಂತರ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.