ಮೈಸೂರು

ಸುತ್ತೂರು ಜೆಎಸ್ಎಸ್ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Published On :

ಕ.ಪ್ರ.ವಾರ್ತೆ   ಸುತ್ತೂರು   ಆ. 15
ಇಲ್ಲಿನ ಜೆಎಸ್ಎಸ್ ಸಂಸ್ಥೆಗಳ ಆಶ್ರಯದಲ್ಲಿ 67ನೇ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಮೈಸೂರಿನ ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ನ ಅಧ್ಯಕ್ಷ ಡಾ.ಆರ್. ಬಾಲಸುಬ್ರಹ್ಮಣ್ಯಂ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶ ಸಾಕಷ್ಟು ಅಭಿವೃದ್ಧಿ ಸಾಧಿಸಿದ್ದರೂ, ರಾಜಕೀಯ ಸ್ವಾತಂತ್ರ್ಯ ಹೊಂದಿದ್ದರೂ ಇನ್ನೂ ಶೇ. 54 ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಸಾಧನೆ-ಸಂಕಷ್ಟಗಳ ನಡುವೆ ಇಂದಿನ ಯುವಕರು ದೇಶದ ಆಶಾಕಿರಣವಾಗಬೇಕಾಗಿದೆ ಎಂದು ಹೇಳಿದರು. ಜೆಎಸ್ಎಸ್ ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಂಯೋಜಕರಾದ ಡಾ. ಅರುಣ್ ಬಳಮಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶಾಲೆಯ ಎನ್ಸಿಸಿ, ಸ್ಕೌಟ್ ಮತ್ತು ಗೈಡ್ಸ್, ಬ್ಯಾಂಡ್ ತಂಡಗಳು ಆಕರ್ಷಕ ಪಥಸಂಚಲನ ನಡೆಸಿ, ಅತಿಥಿಗಳಿಗೆ ಗೌರವ ವಂದನೆ ಸಲ್ಲಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮಲ್ಲಕಂಬ ಪ್ರದರ್ಶನಗಳು ನಡೆದವು. ಶಾಲಾ ಮಕ್ಕಳು ಪ್ರಾರ್ಥಿಸಿದರು. ವಿದ್ಯಾರ್ಥಿನಿ ತನುಜಾ ವಿ. ಪಾಟೀಲ್ ಸ್ವಾಗತಿಸಿದರು. ವಿದ್ಯಾರ್ಥಿ ಬಸವರಾಜ್ ವಂದಿಸಿದರು. ವಿದ್ಯಾರ್ಥಿನಿ ಅನುಷ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.