ಮೈಸೂರು

ತಾಲೂಕಿನಾದ್ಯಂತ ಬೃಹತ್ ಸ್ವಚ್ಛತಾ ಅಭಿಯಾನ

Published On :

ಎಚ್.ಡಿ. ಕೋಟೆ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವ-ಸಹಾಯ ಮತ್ತು ಪ್ರಗತಿ-ಬಂಧು ಸಂಘಗಳ ಮೂಲಕ ತಾಲೂಕಿನಾದ್ಯಂತ 7 ವಲಯಗಳ 10 ವಿವಿಧ ಕಾರ್ಯ ಕ್ಷೇತ್ರಗಳಲ್ಲಿ ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮತ್ತು ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸ್ಥಳೀಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಸದಸ್ಯರು, ಆರೋಗ್ಯಾಧಿಕಾರಿಗಳು, ರೈತ ಮುಖಂಡರು, ಶಾಲಾ ಅಧ್ಯಾಪಕರು, ತಾಲೂಕಿನ ಯೋಜನಾಧಿಕಾರಿಗಳು, ಹೈನುಗಾರಿಕಾ ಅಧಿಕಾರಿಗಳು, ಕೃಷಿ ಅಧಿಕಾರಿಗಳು ಮತ್ತು ಎಲ್ಲಾ ವಲಯಗಳ ಮೇಲ್ವಿಚಾರಕರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಜನರಿಗೆ, ಬಯಲು ಮಲಮೂತ್ರ ವಿಸರ್ಜನೆ ಮಾಡದಿರುವ ಬಗ್ಗೆ, ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯಗಳನ್ನು ರಸ್ತೆಯ ಮೇಲೆ ಎಸೆಯದಿರುವ ಬಗ್ಗೆ, ಗುಟ್ಕಾ, ಸಿಗರೇಟ್, ಬೀಡಿ, ಅಡಿಕೆ ಪ್ಯಾಕೆಟ್ಗಳನ್ನು ರಸ್ತೆಯ ಮೇಲೆ ಎಸೆಯದಿರುವ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಯಿತು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.