ಮಹಾಪುರುಷರನ್ನು ಮರೆತಿರುವುದು ದು:ಖದ ಸಂಗತಿ: ವೇಣುಗೋಪಾಲ್
ಇಲವಾಲ: ದೇಶಕ್ಕಾಗಿ ಹೋರಾಡಿದ ಮಹಾಪುರುಷರನ್ನು ಮರೆತಿರುವುದು ದುಃಖದ ಸಂಗತಿಯಾಗಿದೆ ಎಂದು ಸರ್ವ ಜನಾಂಗ ಹಿತರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ವೇಣುಗೋಪಾಲ್ ಹೇಳಿದರು.
ತಾಲೂಕಿನ ಇಲವಾಲದಲ್ಲಿರುವ ಕಲಾಭಾರತಿ ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಿದ್ದ 67ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪ್ರಸ್ತುತ ರಾಜಕಾರಣ ವ್ಯವಸ್ಥೆಯಲ್ಲಿ ಪ್ರಾಮಾಣಿಕತೆ ನಶಿಸಿ ಹೋಗಿದೆ. ಹಣವಂತರು ಮತ್ತು ಸಮಾಜ ಘಾತುಕ ಶಕ್ತಿಗಳೇ ದಿನ ನಿತ್ಯ ಸಮಾಜದಲ್ಲಿ ಹೆಚ್ಚಾಗುತ್ತಿದ್ದಾರೆ. ಮುಂದೊಂದು ಇವರೆಲ್ಲ ಸಮಾಜಕ್ಕೆ ಮಾರಕವಾಗುವ ಸಂಭವವಿದೆ ಎಂದು ಕಳವಳ ವ್ಯಕ್ತಪಡಿಸಿದರು.ಅಧ್ಯಕ್ಷತೆ ವಹಿಸಿದ್ದ ಜಾನಪದ ವಿದ್ವಾಂಸ ಡಾ.ಪಿ.ಕೆ. ರಾಜಶೇಖರ್ ಮಾತನಾಡಿ, 67 ವರ್ಷಗಳ ಹಿಂದಿನ ಹಾಗೂ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ತಿಳಿಸಿದರು. ಶಾಲಾ ಸಂಸ್ಥಾಪಕ ಹಂ. ಲಕ್ಕೇಗೌಡ, ಸಲಹೆಗಾರ ಗೋವಿಂದೇಗೌಡ, ನಂದೀಶ್ ಇದ್ದರು.
ದೇಶ ಪ್ರಗತಿಗೆ ಪರಿಶ್ರಮ ಅವಶ್ಯ: ಪ್ರೊ. ರಂಗಪ್ಪ
ಮೈಸೂರು: ದೇಶದ ಪ್ರಗತಿಗೆ ಸತತ ಪರಿಶ್ರಮ ವಹಿಸುವ ಅಗತ್ಯವಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ. ಕೆ.ಎಸ್. ರಂಗಪ್ಪ ಹೇಳಿದರು. ಮೈಸೂರು ವಿವಿಯ ಕಾರ್ಯಸೌಧದ ಮುಂಭಾಗದಲ್ಲಿ ಗುರುವಾರ ಏರ್ಪಡಿಸಿದ್ದ 67 ನೇ ಸ್ವಾಂತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಭಾರತವನ್ನು ಬೇರೆ ದೇಶಗಳಿಗೆ ಹೋಲಿಸಿದರೆ ಪ್ರಗತಿ ಸಾಧಿಸಬೇಕಾದದು ಬಹಳ ಇದೆ ಎಂದು ತಿಳಿಸಿದರು. ಕುಲಸಚಿವ ಪ್ರೊ. ಸಿ ಬಸವರಾಜು, ಪರೀಕ್ಷಾಂಗ ಕುಲಸಚಿವ ಪ್ರೊ. ಶ್ರೀಜಯದೇವರಾಜೇ ಅರಸ್, ಹಣಕಾಸು ಅಧಿಕಾರಿ ಪ್ರೊ. ಎಂ. ಚಂದ್ರಕುಮಾರ್, ಯೋಜನಾ ಉಸ್ತುವಾರಿ ಮಂಡಳಿ ನಿರ್ದೇಶಕ ರವಿ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

