ಮೈಸೂರು

ರಾಜ್ಯದ ಅಭಿವೃದ್ಧಿಗೆ ಒಗ್ಗಟ್ಟಿನ ಹೋರಾಟ ಅಗತ್ಯ

Published On :

ಕ.ಪ್ರ. ವಾರ್ತೆ, ಎಚ್.ಡಿ. ಕೋಟೆ, ಆ.16
ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಎಲ್ಲರೂ ಒಗ್ಗೂಡಿ ಹೋಗಬೇಕು ಎಂದು ಶಾಸಕ ಜಿ.ಟಿ. ದೇವೇಗೌಡ ಅಭಿಪ್ರಾಯಪಟ್ಟರು.
ಇಲ್ಲಿನ ಜೆಎಸ್ಎಸ್ ಮಂಗಳ ಮಂಟಪದಲ್ಲಿ ಶುಕ್ರವಾರ ವಿಧಾನ ಪರಿಷತ್ ಉಪಚುನಾವಣೆ ಪ್ರಚಾರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ನಂತರ ನಡೆದ ಎರಡನೇ ಅಧಿವೇಶನದಲ್ಲಿ ನಡೆದ ಘಟನೆಯನ್ನು ಎಲ್ಲರೂ ಅರಿತಿದ್ದೀರಿ. ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಭಾವಚಿತ್ರ ತೆಗೆದುಹಾಕಿ ಗೊಂದಲ ನಿರ್ಮಿಸಿದರು.
ಮುಖ್ಯಮಂತ್ರಿಗಳು ಗ್ರಾಪಂ ಸದಸ್ಯರ ಅಧಿಕಾರ ಕಸಿದುಕೊಳ್ಳುತ್ತಿದ್ದಾರೆ. ಆದರೆ ರಾಜ್ಯದ ಹಲವು ಸಂಸದರು ತಮ್ಮ ಹಣವನ್ನು ಸಮರ್ಪಕವಾಗಿ ಬಳಸಿಕೊಂಡಿಲ್ಲ ಹಾಗೂ ಸಭೆಯನ್ನು ನಡೆಸಿಲ್ಲ. ಅಂತಹವರ ಅಧಿಕಾರ ಕಸಿದುಕೊಳ್ಳಲು ಇವರಿಂದ ಸಾಧ್ಯವಾಗುತ್ತಿಲ್ಲ. ಗ್ರಾಮ ಸಭೆಗಳು ನಡೆಯದಿದ್ದರೆ ಸಂಬಂಧಿಸಿದ ಪಿಡಿಒ ಮೇಲೆ ಕ್ರಮ ಜರುಗಿಸಲಿ, ಅದಕ್ಕೆ ಬದಲಾಗಿ ಸದಸ್ಯರ ಸದಸ್ಯತ್ವವನ್ನು ಕಸಿದುಕೊಳ್ಳುವುದು ಸರಿಯಲ್ಲ ಎಂದು ಹೇಳಿದರು. ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಹೊರತುಪಡಿಸಿ ಬೇರೆ ಪಕ್ಷಗಳು ಒಂದಾಗಿ ಕಾಂಗ್ರೆಸ್ಗೆಕ್ಕೆ ತಕ್ಕ ಪಾಠ ಕಲಿಸಬೇಕಾಗಿದೆ. ಆದ್ದರಿಂದ ನಾವು ಒಂದಾಗಿದ್ದೇವೆ ಎಂದು ರಾಜ್ಯದಲ್ಲಿ ನಡೆಯುತ್ತಿರುವ ಐದು ಚುನಾವಣೆಯಲ್ಲಿಯೂ ಕಾಂಗ್ರೆಸ್ಸೇತರ ಪಕ್ಷ ಜಯಗಳಿಸಲಿದ್ದು, ಇದು ಮುಂದಿನ ಲೋಕಸಭಾ ಚುನಾವಣೆಗೆ ನಾಂದಿಯಾಗಲಿದೆ ಎಂದು ತಿಳಿಸಿದರು. ಶಾಸಕ ಎಸ್. ಚಿಕ್ಕಮಾದು ಮಾತನಾಡಿ, ಕಾಂಗ್ರೆಸ್ ಹಠಮಾರಿತನದಿಂದ ಹೊಂದಾಣಿಕೆ ಸಾಧ್ಯವಾಗಲಿಲ್ಲ. ಆದರೆ ಯಾವುದೆ ಪಕ್ಷ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಜತೆ ಹೊಂದಾಣಿಕೆ ಮಾಡಿಕೊಂಡರೆ ಅದು ಒಳ್ಳೆಯದು. ಆದರೆ ಬೇರೆ ಪಕ್ಷಗಳ ಜತೆ ಹೊಂದಾಣಿಕೆ ಮಾಡಿಕೊಂಡರೆ ಅದು ಕೋಮುವಾದಿ ಪಕ್ಷ ಎಂದು ಹೇಳುವುದು ಕಾಂಗ್ರೆಸ್ಗೆ ಎಷ್ಟರ ಮಟ್ಟಿಗೆ ಸರಿ ಎಂದು ತಿಳಿಯಬೇಕಾಗಿದೆ ಎಂದರು.
ಕೆಜೆಪಿ ಅಭ್ಯರ್ಥಿ ಶೇಖರ್, ತಾಲೂಕು ಜೆಡಿಎಸ್ ಅಧ್ಯಕ್ಷ ಸಿ.ವಿ. ನಾಗರಾಜು, ಬಿಜೆಪಿ ಅಧ್ಯಕ್ಷ ಯೋಗೀಶ್, ಕೆಜೆಪಿ ಅಧ್ಯಕ್ಷ ಎಚ್.ಸಿ. ಶಿವಣ್ಣ, ಜೆಡಿಎಸ್ ಜಿಲ್ಲಾ ಸಂಚಾಲಕ ಕುಮಾರ್, ರಾಜೀವ್, ಎಂ.ಸಿ. ದೊಡ್ಡನಾಯಕ, ಮಾಜಿ ಜಿಪಂ ಸದಸ್ಯರಾದ ವೆಂಕಟಸ್ವಾಮಿ, ರವಿ, ಎಂ.ಪಿ. ನಾಗರಾಜು, ಕಡಕೊಳ ನಾಗರಾಜು, ತಾಪಂ ಅಧ್ಯಕ್ಷೆ ಲಕ್ಷ್ಮಿ ರಮೇಶ್, ಉಪಾಧ್ಯಕ್ಷ ಮಹೇಂದ್ರ, ಹೊ.ಕೆ. ಮಹೇಂದ್ರ, ಮೊತ್ತ ಬಸವರಾಜು, ನಾಗರಾಜು ಇದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.