ಮೈಸೂರು

ಜಗನ್ಮೋಹನ ಅರಮನೆ ಶೀಘ್ರ ನವೀಕರಣ: ಶ್ರೀನಿವಾಸಪ್ರಸಾದ್ ಭರವಸೆ

Published On :

ಕ.ಪ್ರ.ವಾರ್ತೆ    ಮೈಸೂರು    ಜು. 16
ಜಗನ್ಮೋಹನ ಅರಮನೆಯ ನವೀಕರಣ ಕಾರ್ಯವನ್ನು ಶೀಘ್ರವೇ ಕೈಗೆತ್ತಿಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಶ್ರೀನಿವಾಸಪ್ರಸಾದ್ ಭರವಸೆ ನೀಡಿದರು.
ಪಾತಿ ಫೌಂಡೇಷನ್ ನಗರದ ಜಗನ್ಮೋಹನ ಅರಮನೆಯಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯೋತ್ಸವದಲ್ಲಿ ಫೌಂಡೇಷನ್ ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಐತಿಹಾಸಿಕ ಹಿನ್ನೆಲೆಯುಳ್ಳ ಭವ್ಯ ಸಭಾಂಗಣವನ್ನು ನವೀಕರಿಸುವ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು ಎಂದರು.
ಇದೇ ವೇಳೆ ಮೈಕ್ ಚಂದ್ರು ಅವರಿಗೆ ಧ್ವನಿಸಿರಿ ಎಂಬ ಬಿರುದು ನೀಡಿ ಸನ್ಮಾನಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಡಾ.ಗೀತಾ ಕೆ. ಅವಧಾನಿ, ಬಸವರಾಜ ಮಾಲಗತ್ತಿ, ಡಿ.ರೇವಣ್ಣ, ಆರ್. ಉಜ್ಮಾಭಾನು, ವಿ. ಸುಮಾ ಅವರನ್ನು ಅಭಿನಂದಿಸಲಾಯಿತು.ಶ್ರೀ ಇಳೈ ಆಳ್ವಾರ್ ಸ್ವಾಮೀಜಿ, ಆರ್ಎಸ್ಎಸ್ ಸಂಚಾಲಕ ವೆಂಕಟರಾಮ್, ಶಾಸಕ ಸಿ.ಎಚ್. ವಿಜಯಶಂಕರ್, ಎಂ.ಕೆ. ಸೋಮಶೇಖರ್, ಮಾಜಿ ಶಾಸಕ ಇ.ಮಾರುತಿರಾವ್ ಪವಾರ್, ಮಾಜಿ ಮೇಯರ್ ಸಂದೇಶ್ಸ್ವಾಮಿ, ಉದ್ಯಮಿ ಯಶಸ್ವಿ ಸೋಮಶೇಖರ್, ಕೆ.ಆರ್. ಮೋಹನ್ಕುಮಾರ್, ವೆಂಕಟೇಶ್, ಏರ್ಟೆಲ್ ಮಂಜು, ಪಾಲಿಕೆ ಮಾಜಿ ಸದಸ್ಯ ಎಂ.ಡಿ. ಪಾರ್ಥಸಾರಥಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.