ಮೈಸೂರು

'ಜನರಿಗೆ ಸರ್ಕಾರಿ ಸವಲತ್ತು ತಲುಪಿಸಿ'

Published On :

ಕ.ಪ್ರ.ವಾರ್ತೆ    ಮೈಸೂರು    ಜು. 16
ಮತದಾರರಿಗೆ ಸರ್ಕಾರದಿಂದ ದೊರೆಯುವ ಮೂಲಭೂತ ಸವಲತ್ತನ್ನು ದೊರಕಿಸಿಕೊಡಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕಾದದ್ದು ಪ್ರತಿಯೊಬ್ಬ ಚುನಾಯಿತ ಜನಪ್ರತಿನಿಧಿಯ ಕರ್ತವ್ಯವಾಗಿದೆ ಎಂದು ಸಂಸದ ಎಚ್. ವಿಶ್ವನಾಥ್ ಹೇಳಿದರು.
ನಗರಪಾಲಿಕೆಯ 36ನೇ ವಾರ್ಡಿನ ಕಾಂಗ್ರೆಸ್ ಸದಸ್ಯ ಪಿ. ಪ್ರಶಾಂತ್ಗೌಡ ಅವರು ಡಿ.ದೇವರಾಜ ಅರಸು ರಸ್ತೆಯ ಪಕ್ಕದ ಬಿಡಾರಂ ಕೃಷ್ಣಪ್ಪ ರಸ್ತೆಯಲ್ಲಿ ಆರಂಭಿಸಿರುವ ಸಾರ್ವಜನಿಕ ಸಂಪರ್ಕ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಜನ ಸೇವೆಗಾಗಿ ಕಚೇರಿ ಆರಂಭಿಸಿರುವುದು ಶ್ಲಾಘನೀಯ ಎಂದರು.
ಸವಲತ್ತುಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕಾದರೆ ಜನಪ್ರತಿನಿಧಿಗಳ ಜತೆಗೆ ಸಾರ್ವಜನಿಕರು ಕೈಜೋಡಿಸಬೇಕು. ಇದರೊಂದಿಗೆ ಸರ್ಕಾರದಿಂದ ಅನುಕೂಲ ಪಡೆಯ ಬಯಸುವ ಫಲಾನುಭವಿಗಳು ಅರ್ಹರಾಗಿದ್ದರೆ ಮಾತ್ರ ಅರ್ಜಿ ಸಲ್ಲಿಸಬೇಕು ಎಂದು ಸಲಹೆ ನೀಡಿದರು.
ಚಾಮರಾಜ ಕ್ಷೇತ್ರದ ಶಾಸಕ ವಾಸು, ಪಾಲಿಕೆ ಸದಸ್ಯರಾದ ಡಿ.ನಾಗಭೂಷಣ್, ಸ್ನೇಕ್ ಶ್ಯಾಂ, ಮಾಜಿ ಸದಸ್ಯ ಕೃಷ್ಣಪ್ಪ, ಡಿಸಿಸಿ ಕಾರ್ಯದರ್ಶಿ ರಮೇಶ್, ಯುವ ಘಟಕದ ಕಾರ್ಯದರ್ಶಿ ಗುರುರಾಜ್, ರಘು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.