ಅಪರಾಧ ಮುಕ್ತ ಸಮಾಜ ನಿರ್ಮಿಸಬೇಕು
ಕ.ಪ್ರ. ವಾರ್ತ್ಣೆ ಮೈಸೂರ್ಣು ಆ.17
ಅಪರಾಧ ಮುಕ್ತ ಸಮಾಜ ನಿರ್ಮಾಣದ ಹೊಣೆ ಪ್ರತಿಯೊಬ್ಬರ ಮೇಲಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ಹೇಳಿದರು.
ಪೀಪಲ್ಸ್ ಲೀಗಲ್ ಫೋರಂ (ಪಿಎಲ್ಎಫ್) ಶನಿವಾರ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಪರಾಧ ವಿಭಾಗದ ಪೊಲೀಸರಿಗಾಗಿ ಆಯೋಜಿಸಿದ್ದ ಮಕ್ಕಳ ಹಕ್ಕುಗಳು ಮತ್ತು ಬಾಲನ್ಯಾಯ ನಿಯಮಗಳು ಕುರಿತ ಕಾರ್ಯಾಗಾರವನ್ನು ಅವರು ಉದ್ಘಾಟಿಸಿ ಮಾತನಾಡಿದರು. 8 ರಿಂದ 18 ವರ್ಷದವರೆಗೆ ಮಕ್ಕಳ ದೈಹಿಕ ಬೆಳವಣಿಗೆ ಜತೆಗೆ ಮಾನಸಿಕ ಬೆಳವಣಿಗೆ ಆಗುತ್ತದೆ. ಸುತ್ತಮುತ್ತಲಿನ ಪರಿಸರ, ಸನ್ನಿವೇಶಗಳಿಂದಾಗಿ ಮಕ್ಕಳು ಅಪರಾಧ ಜಗತ್ತಿಗೆ ದೂಡುತ್ತಿದ್ದಾರೆ. 18 ವರ್ಷದೊಳಗಿನ ಮಕ್ಕಳನ್ನು ವಿಚಾರಣೆಗೊಳಪಡಿಸುವಾಗ ಪೊಲೀಸರು ಮಾನವೀಯತೆಯಿಂದ ನಡೆದುಕೊಳ್ಳಬೇಕು. ಅಪರಾಧ ಮಾಡದಂತೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.
ಸಾಂತ್ವನ ನೀಡಿ: 16 ಮತ್ತು 17 ವಯಸ್ಸು ಅಪಾಯಕಾರಿ. ಕೆಟ್ಟದರ ಕಡೆಗೆ ಮಕ್ಕಳ ಮನಸ್ಸು ವಾಲುತ್ತದೆ. ಹೀಗಾಗಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಾರೆ.
ಹೆಣ್ಣು ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಮಕ್ಕಳ ದೌರ್ಬಲ್ಯವನ್ನು ಅಪರಾಧಿಗಳು ಬಳಸಿಕೊಳ್ಳುತ್ತಿದ್ದಾರೆ. ಮಕ್ಕಳು ಅಪರಾಧಿ ಆಗುವುದನ್ನು ತಡೆಯುವ ಹೊಣೆಗಾರಿಕೆ ಸಮಾಜ ಮತ್ತು ಪೊಲೀಸರ ಮೇಲಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಗುರಿಯಾಗಬೇಕು. ನೋಂದವರಿಗೆ ಸಾಂತ್ವನ ನೀಡಬೇಕು. ಮಕ್ಕಳ ಹಕ್ಕುಗಳ ಸಂರಕ್ಷಣೆ ಆಗಬೇಕು ಎಂದು ತಿಳಿಸಿದರು. ಮಕ್ಕಳ ಹಕ್ಕುಗಳು ಮತ್ತು ಬಾಲನ್ಯಾಯ ನಿಯಮಗಳು ಕುರಿತು ಪಿಎಲ್ಎಫ್ ನಿರ್ದೇಶಕ ಮತ್ತು ಬಾಲನ್ಯಾಯ ಮಂಡಳಿ ಸದಸ್ಯ ಪಿ.ಪಿ. ಬಾಬುರಾಜ್ ಮಾತನಾಡಿದರು. ಡಿಸಿಪಿಗಳಾದ ಎ.ಎನ್. ರಾಜಣ್ಣ, ಎಂ.ಎಂ. ಮಹದೇವಯ್ಯ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆರ್. ಸೋಮಲತಾ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

