ಮೈಸೂರು

ಲಾರಿ ಡಿಕ್ಕಿ: ಪಾದಚಾರಿ ಸಾವು

Published On :

ನಂಜನಗೂಡು: ಜಮೀನಿಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಮರಳು ತುಂಬಿದ್ದ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬಸವನಪುರ ಗೇಟ್ ಸಮೀಪದ ನಾಲೆಯ ಪಕ್ಕದ ರಸ್ತೆಯಲ್ಲಿ ಶನಿವಾರ ಜರುಗಿದೆ. ತಾಲೂಕಿನ ಬಸವನಪುರ ಗ್ರಾಮದ ನಿವಾಸಿ ಮರಿಗೌಡ (65) ಮೃತಪಟ್ಟವರು. ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ಜಿ.ಎಸ್. ರಘು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಬದನವಾಳು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್ ಡಿಕ್ಕಿ: ಬೈಕ್ ಸವಾರ ಸಾವು
ಹುಣಸೂರು: ಹಿಂದಿನಿಂದ ಬಂದ ಸಾರಿಗೆ ಬಸ್ ಬೈಕಿಗೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ಕುಪ್ಪೆ- ರಂಗಯ್ಯನಕೊಪ್ಪಲು ಗೇಟ್ ಬಳಿ ನಡೆದಿದೆ. ತಾಲೂಕಿನ ತಿಪ್ಪಲಾಪುರ ಗ್ರಾಮದ ನಿವಾಸಿ ರಾಮಯ್ಯ ಎಂಬವರ ಪುತ್ರ ಶೇಖರ್ (40) ಮೃತಟ್ಟವರು. ಇವರಿಗೆ ಪತ್ನಿ, ಮೂವರು ಮಕ್ಕಳಿದ್ದಾರೆ. ಬಿಳಿಕೆರೆಯಿಂದ ಹುಣಸೂರು ಕಡೆಗೆ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಈ ಸಂಬಂಧ ಬಿಳಿಕೆರೆ ಠಾಣೆಯ ಎಸ್ಐ ರಾಘವೇಂದ್ರ ಮತ್ತು ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು, ಬಸ್ ಚಾಲಕನನ್ನು ಬಂಧಿಸಿದ್ದಾರೆ.
 ಜಾನುವಾರು ಕಳವು
ಹುಣಸೂರು: ಚೌಡಿಕಟ್ಟೆ ಗ್ರಾಮದಲ್ಲಿ ಎರಡು ಹಸು, ಎರಡು ಕರು ಕಳವಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ವಿಶ್ವನಾಥರಾವ್ ಕಾಟೆಯವರಿಗೆ ಸೇರಿದ ಈ ಹಸುಗಳು ಅಂದಾಜು 80 ಸಾವಿರ ಬೆಲೆ ಬಾಳಲಿದೆ. ಈ ಸಂಬಂಧ ಹುಣಸೂರು ಗ್ರಾಮಾಂತರ ಠಾಣೆಯ ಎಸ್ಐ ಲಿಂಗರಾಜು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೆ ವಿಶ್ವನಾಥರಾವ್ ಕಾಟೆಯವರ ಪುತ್ರ ರೂಪೇಶ್ ಅಪಘಾತದಲ್ಲಿ ಮೃತಪಟ್ಟಿದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.