ಮೈಸೂರು

ಪೊಲೀಸರಿಗೆ ಸಾರ್ವಜನಿಕರ ಮೌಖಿಕ ದೂರು ಹಲವು

Published On :

ಕ.ಪ್ರ.ವಾರ್ತೆ ,  ಮೈಸೂರು ,  ಆ. 18
ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಭಾನುವಾರ ಸಾರ್ವಜನಿಕ ಕುಂದುಕೊರತೆ ಸಭೆ ನಡೆಯಿತು. ಈ ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರ ಮೌಖಿಕ ದೂರುಗಳನ್ನು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಆಲಿಸಿದರು. ಬೆಳಗ್ಗೆ 11.30 ರಿಂದ ಮಧ್ಯಾಹ್ನ 1.30 ರವರೆಗೆ ನಡೆದ ಈ ಸಭೆಯಲ್ಲಿ ಹಿರಿಯ ನಾಗರಿಕರು ಹೆಚ್ಚಾಗಿ ಪಾಲ್ಗೊಂಡಿದ್ದರು. ಬಡಾವಣೆಗಳಲ್ಲಿ ಪುಂಡರ ಹಾವಳಿ ತಪ್ಪಿಸುವಂತೆ ಹಲವರು ಕೋರಿಕೊಂಡರು. ರಾತ್ರಿವೇಳೆ ಪೊಲೀಸರ ಗಸ್ತು ಹೆಚ್ಚಾಗಲಿ. ಸರ ಅಪಹರಣ, ಕನ್ನಾ ಕಳವಿಗೆ ಕಡಿವಾಣ ಹಾಕುವಂತೆ ಸಾರ್ವಜನಿಕರು ಸಲಹೆ ನೀಡಿದರು. ಅಲ್ಲದೆ, ಹಲವರು ತಮ್ಮ ಕೌಟುಂಬಿಕ ಹಾಗೂ ಸಾಮಾಜಿಕ ಸಮಸ್ಯೆಗಳನ್ನು ಪೊಲೀಸರ ಮುಂದಿಟ್ಟರು.
ದೇವರಾಜ, ಲಷ್ಕರ್, ನಜರ್‌ಬಾದ್, ಉದಯಗಿರಿ, ನರಸಿಂಹರಾಜ, ಮಂಡಿ, ವಿವಿ ಪುರಂ, ಮೇಟಗಳ್ಳಿ, ಜಯಲಕ್ಷ್ಮಿಪುರಂ, ವಿಜಯನಗರ, ಕೃಷ್ಣರಾಜ, ಲಕ್ಷ್ಮಿಪುರಂ, ಅಶೋಕಪುರಂ, ವಿದ್ಯಾರಣ್ಯಪುರಂ, ಸರಸ್ವತಿಪುರಂ ಮತ್ತು ಕುವೆಂಪುನಗರ ಠಾಣೆಗಳಲ್ಲಿ ಕುಂದುಕೊರತೆ ಸಭೆ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.