ಮೈಸೂರು

ಉಪಚುನಾವಣೆಯಲ್ಲಿ ಜೆಡಿಎಸ್‌ಗೆ ಜಯ: ದ್ವಾರಕೀಶ್

Published On :

ಕೆ.ಆರ್. ನಗರ: ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದು ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಜೆ. ದ್ವಾರಕೀಶ್ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ವಿಜಯನಗರ ಬಡಾವಣೆಯಲ್ಲಿ ಮನೆ ಮನೆಗೆ ತೆರಳಿ ಪಕ್ಷದ ಅಭ್ಯರ್ಥಿ ಸಿ.ಎಸ್. ಪುಟ್ಟರಾಜು ಪರ ಮತಯಾಚಿಸಿ ಮಾತನಾಡಿದ ಅವರು, ಹಿಂದುಳಿದವರಿಗೆ ಮತ್ತು ತುಳಿತಕ್ಕೊಳಗಾದವರಿಗೆ ಅಧಿಕಾರ ನೀಡಿದ ಕೀರ್ತಿ ಜೆಡಿಎಸ್‌ಗೆ ಸಲ್ಲುತ್ತದೆ. ಆದ್ದರಿಂದ ಜನತೆ ಪಕ್ಷವನ್ನು ಬೆಂಬಲಿಸಿ ಉಪ ಚುನಾವಣೆಯಲ್ಲಿ ಗೆಲುವಿನ ಗೆರೆ ದಾಟಿಸಲಿದ್ದಾರೆ ಎಂದರು.
ಕಾಂಗ್ರೆಸ್‌ನ ದುರಾಲೋಚನೆ ಮತ್ತು ಕೆಟ್ಟ ರಾಜಕೀಯ ಚಾಳಿಯಿಂದ ಉಪ ಚುನಾವಣೆ ಎದುರಾಗಿದ್ದು ಇದನ್ನು ಜೆಡಿಎಸ್ ಮೇಲೆ ಹೊರಿಸುವ ನೀಚ ರಾಜಕಾರಣವನ್ನು ಕಾಂಗ್ರೆಸ್‌ನವರು ಮಾಡುತ್ತಿದ್ದಾರೆ. ಇದಕ್ಕೆ ಎರಡು ಕ್ಷೇತ್ರಗಳಲ್ಲಿಯೂ ಮತದಾರ ಪ್ರಭುಗಳು ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಚಂದ್ರಶೇಖರ್, ತಾಪಂ ಸದಸ್ಯ ಯಶವಂತ್ ಮಲ್ಲಿಗೆರೆ, ತಾಲೂಕು ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಚಿಕ್ಕಹನಸೋಗೆ ಪಾಲಾಕ್ಷ, ಗ್ರಾಪಂ ಸದಸ್ಯರಾದ ಚೌಕಹಳ್ಳಿ ರಾಜಣ್ಣ, ರೀಟಾಮೇರಿ, ನಾಗೇಶ್, ಬಾಬು, ಹೊಸಹಳ್ಳಿ ಪುಟ್ಟರಾಜು, ಟಿಎಪಿಎಂಎಸ್ ಮಾಜಿ ಅಧ್ಯಕ್ಷ ಬಿ.ಇ. ಯೋಗಾನಂದ, ದಲಿತ ಮುಖಂಡ ಗೊರಗುಂಡಿ ಶ್ರೀನಿವಾಸಪ್ರಸಾದ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.