ಮೈಸೂರು

ಕನ್ನಡಕ್ಕೆ ಅಭಿಮಾನ್ಯ ಶೂನ್ಯದ ಗೆದ್ದಿಲು

Published On :

ಕ.ಪ್ರ.ವಾರ್ತೆ ,  ಮೈಸೂರು ,  ಆ. 18
ಸಾವಿರಾರು ವರ್ಷಗಳಷ್ಟು ಇತಿಹಾಸವುಳ್ಳ ಕನ್ನಡ ಭಾಷೆಗೆ ಅಭಿಮಾನ್ಯ ಶೂನ್ಯದ ಗೆದ್ದಿಲು ಹಿಡಿದಿದೆ ಎಂದು ಕವಯತ್ರಿ ಡಾ.ಲತಾ ರಾಜಶೇಖರ್ ವಿಷಾದಿಸಿದರು.
ಭಾನುವಾರ ನಗರದ ಎಂಜಿನಿಯರುಗಳ ಸಂಸ್ಥೆಯಲ್ಲಿ ನಡೆದ ಕನ್ನಡ ಬೆಳಕು ವಾರಪತ್ರಿಕೆಯ 20ನೇ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮರವನ್ನು ಗೆದ್ದಿಲು ತಿಂದು ನಾಶ ಮಾಡುವಂತೆ ಕನ್ನಡವನ್ನು ಅಭಿಮಾನ್ಯ ಶೂನ್ಯವೆಂಬ ಗೆದ್ದಿಲು ತಿಂದು ನಾಶ ಮಾಡುತ್ತಿದೆ. ಇದರ ಜತೆಗೆ ಇಂಗ್ಲಿಷ್ ಕೂಡ ಸಹಕಾರ ನೀಡುತ್ತಿರುವುದು ದುರ್ದೈವದ ಸಂಗತಿ ಎಂದರು.
ನಾಲ್ಕು ದಶಕಗಳಿಂದ ಕನ್ನಡ ಹೋರಾಟಗಳಲ್ಲಿ ಭಾಗವಹಿಸುತ್ತ ಬಂದಿರುವ ಮೂಗೂರು ನಂಜುಂಡಸ್ವಾಮಿ ಅವರದು ಕನ್ನಡದ ಧ್ವನಿ. 20 ವರ್ಷಗಳಿಂದ ಕನ್ನಡ ಬೆಳಕು ಪತ್ರಿಕೆಯನ್ನು ಹೊರತಂದು ಕನ್ನಡ ಸೇವೆ ಮಾಡುತ್ತಿದ್ದಾರೆ. ನಮ್ಮಲ್ಲಿ ಕನ್ನಡ ಹೋರಾಟಗಾರರಿಗೆ ಮಹತ್ವ ನೀಡಬೇಕಿದೆ ಎಂದು ಆಶಿಸಿದರು.
ಶಾಸಕ ಜಿ.ಟಿ. ದೇವೇಗೌಡ ಕನ್ನಡ ಬೆಳಕು ವಿಶೇಷ ಸಂಚಿಕೆ ಬಿಡುಗಡೆಗೊಳಿಸಿದರು. ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ. ಬಸವೇಗೌಡ, ಕಸಾಪ ಜಿಲ್ಲಾಧ್ಯಕ್ಷ ಎಂ. ಚಂದ್ರಶೇಖರ್, ಎಂಜಿನಿಯರುಗಳ ಸಂಸ್ಥೆಯ ಅಧ್ಯಕ್ಷ ಡಾ.ಟಿ. ಅನಂತಪದ್ಮನಾಭ, ಕನ್ನಡ ಬೆಳಕು ಪತ್ರಿಕೆ ಸಂಪಾದಕ ಮೂಗೂರು ನಂಜುಂಡಸ್ವಾಮಿ ಇದ್ದರು. ಕಸಾಪ ಪ್ರಧಾನ ಕಾರ್ಯದರ್ಶಿ ಡಾ.ವೈ.ಡಿ. ರಾಜಣ್ಣ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.