ಮೈಸೂರು

'ಅಭಿವೃದ್ಧಿ ಮುಂದಿಟ್ಟು ಮತಯಾಚಿಸುವೆ'

Published On :

ಕ.ಪ್ರ.ವಾರ್ತೆ ,  ಸಾಲಿಗ್ರಾಮ್ಣ ಆ. 19
ಸರ್ಕಾರದ ಅಭಿವೃದ್ಧಿ ಹಾಗೂ ಜನಪರ ಯೋಜನೆಗಳನ್ನು ಜನತೆಯ ಮುಂದಿಟ್ಟು ಮತ ಕೇಳುತ್ತೇವೆಯೇ ಹೊರತು ಯಾವುದೇ ಪಕ್ಷ ಮತ್ತು ವ್ಯಕ್ತಿಗಳನ್ನು ಟೀಕಿಸಿ ಕೇಳುವುದಿಲ್ಲ ಎಂದು ವಸತಿ ಸಚಿವ ಅಂಬರೀಷ್ ಹೇಳಿದರು. ಸೋಮವಾರ ಪಟ್ಟಣದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಟಿ ರಮ್ಯಾ ಪರವಾಗಿ ಮತಯಾಚಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸರ್ಕಾರವು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ಕ್ಷಣದಲ್ಲೇ ಒಂದು ರು.ಗೆ ಒಂದು ಕೆಜಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಸೇರಿದಂತೆ ಇನ್ನಿತರ ಜನಪರ ಯೋಜನೆ ಪ್ರಕಟಿಸಿದೆ ಎಂದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ನನಗೆ ಕೆ.ಆರ್. ನಗರ ತಾಲೂಕಿನ ಜನತೆ ಅತೀ ಹೆಚ್ಚಿನ ಮತಗಳನ್ನು ನೀಡಿದರೂ, ನಾನು ಆ ಚುನಾವಣೆಯಲ್ಲಿ ಸೋಲುಂಡೆ. ಜನರ ಪ್ರೀತಿ ಮತ್ತು ಅಭಿಮಾನದಿಂದ ಇಂದು ಸಚಿವನಾಗಿ ನಿಮ್ಮ ಮುಂದೆ ಬಂದು ನಿಂತಿದ್ದೇನೆ ಎಂದು ತಿಳಿಸಿದರು. ಇದಕ್ಕೂ ಮುನ್ನ ಸಾಲಿಗ್ರಾಮದ ಶ್ರೀ ಯೋಗಾನರಸಿಂಹ ಸ್ವಾಮಿ ದೇವಸ್ಥಾನದಿಂದ ಚುಂಚನಕಟ್ಟೆ ರಸ್ತೆಯ ಮೂಲಕ ತೆರೆದ ವಾಹನದಲ್ಲಿ ಅಭ್ಯರ್ಥಿ ನಟಿ ರಮ್ಯಾ, ಸಂಸದ ಎಚ್. ವಿಶ್ವನಾಥ್, ಅರಕಲಗೂಡಿನ ಶಾಸಕ ಎ.ಮಂಜು, ರಾಜ್ಯಸಭಾ ಮಾಜಿ ಸದಸ್ಯ ಎಚ್.ಕೆ.ಜವರೇಗೌಡ, ಜಿಪಂ ಸದಸ್ಯರಾದ ಸುಮಿತ್ರಾ ಗೋವಿಂದರಾಜು, ಮುಖಂಡರಾದ ದೊಡ್ಡಸ್ವಾಮೀಗೌಡ, ಅನುರಾಧಾ ಮಹದೇವು, ಬಾಬು ಹನುಮಾನ್ ಸಾಗಿ ಮತಯಾಚಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.