ಮೈಸೂರು

ನಿಲ್ಲದ ಬಸ್ಸಿಗೆ ಕಲ್ಲು ಹೊಡೆದರು

Published On :

ಕ.ಪ್ರ.ವಾರ್ತೆ ,  ಮೈಸೂರು ,  ಆ. 19
ನಿಗದಿತ ಜಾಗದಲ್ಲಿ ನಿಲ್ಲದೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಕಲ್ಲು ತೂರಿ ಗಾಜು ಪುಡಿ ಮಾಡಿರುವ ಘಟನೆ ಜಯಪುರದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಮೈಸೂರು ತಾಲೂಕು ಜಯಪುರದಿಂದ ನಿತ್ಯ ನೂರಾರು ಮಂದಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯ ನಿಮಿತ್ತ ಮೈಸೂರಿಗೆ ಬರುತ್ತಾರೆ. ಹೀಗಾಗಿ ಹಲವರು ಬಸ್ ಪಾಸ್ ಮಾಡಿಸಿಕೊಂಡಿದ್ದಾರೆ. ನಿಗದಿತ ಜಾಗದಲ್ಲಿ ಚಾಲಕರು ಬಸ್ ನಿಲ್ಲಿಸದೆ ಮುಂದೆ ಹೋಗುತ್ತಿದ್ದರು. ಕೆಲವು ಬಸ್ಸುಗಳು ಮಾತ್ರ ನಿಗದಿತ ಜಾಗದಲ್ಲಿ ನಿಲ್ಲುತ್ತಿದ್ದವು. ಪ್ರತಿನಿತ್ಯ ಬಸ್‌ಗಳನ್ನು ನಿಲ್ಲಿಸದೇ ಹೋಗುತ್ತಿದ್ದರಿಂದ ಪ್ರಯಾಣಿಕರು ಆಕ್ರೋಶಗೊಂಡಿದ್ದರು.
ಎಚ್.ಡಿ. ಕೋಟೆ ಡಿಪೋಗೆ ಸೇರಿದ ಬಸ್ಸು, ಕೋಟೆಯಿಂದ ಮೈಸೂರಿಗೆ ಬರುತ್ತಿತ್ತು. ಬೆಳಗ್ಗೆ 9.30ಕ್ಕೆ ಜಯಪುರಕ್ಕೆ ಬಂದಿದ್ದು, ನಿಗದಿತ ಸ್ಥಳದಲ್ಲಿ ಚಾಲಕ ಬಸ್ ನಿಲ್ಲಿಸದೆ ಮುಂದೆ ಹೋಗುತ್ತಿದ್ದ. ಇದರಿಂದ ಕುಪಿತಗೊಂಡ ಕೆಲವು ಪ್ರಯಾಣಿಕರು ಕಲ್ಲು ತೂರಿದ್ದು, ಹಿಂಭಾಗದ ಗಾಜು ಪುಡಿಯಾಗಿದೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೋರ್ಡ್, ಲೈಟ್ ಹಾಕಲ್ಲ: ಮೈಸೂರು ನಗರದಿಂದ ಗ್ರಾಮಾಂತರ ಪ್ರದೇಶಕ್ಕೆ ಎಚ್.ಡಿ. ಕೋಟೆ ರಸ್ತೆ ಮಾರ್ಗವಾಗಿ ಹಲವು ಕೆಎಸ್‌ಆರ್‌ಟಿಸಿ ಬಸ್ಸುಗಳು ಸಂಚರಿಸುತ್ತಿವೆ. ಆದರೆ, ಹಲವು ಬಸ್ಸುಗಳಲ್ಲಿ ಎಲ್ಲಿಂದ ಎಲ್ಲಿಗೆ ಹೋಗುತ್ತಿದೆ ಎಂಬುದರ ಬಗ್ಗೆ ನಾಮಫಲಕ ಹಾಕಿರುವುದಿಲ್ಲ. ರಾತ್ರಿ ವೇಳೆಯಲ್ಲಿ ಬೋರ್ಡ್‌ಗೆ ಲೈಟ್ ಹಾಕುವುದಿಲ್ಲ. ಇದರಿಂದ ಪ್ರಯಾಣಿಕರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಜಯಪುರ ಗ್ರಾಮಸ್ಥರು ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.