'ಧರ್ಮದ ತಳಹದಿ ಮೇಲೆ ವಿಜ್ಞಾನ ಬೆಳೆಯಲಿ'
ಕ.ಪ್ರ.ವಾರ್ತೆ , ಮೈಸೂರು , ಆ. 20
ಧರ್ಮದ ತಳಹದಿಯ ಮೇಲೆ ವಿಜ್ಞಾನ ಬೆಳೆಯುವ ಅಗತ್ಯವಿದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.
ಕುಂಬಾರಕೊಪ್ಪಲು ಅಭ್ಯುದಯ ಸಂಘವು ಪುರಾತನ ಪ್ರಸಿದ್ಧ ಮಹದೇಶ್ವರಸ್ವಾಮಿ ದೇವಸ್ಥಾನದ ಆವಣರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಾದಯ್ಯನ ಗಿರಿ ಹಾಗೂ ಚಿತ್ರಕಲಾ ಸಂಗ್ರಹಾಲಯಕ್ಕೆ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.
ವಿಜ್ಞಾನ ಹಾಗೂ ತಂತ್ರಜ್ಞಾನ ಸಾಕಷ್ಟು ಮುಂದುವರಿದಿದ್ದು, ಆದರಿಂದಾಗಿ ಮನುಷ್ಯ ಅನುಭವಿಸುತ್ತಿರುವ ಸಂಕಷ್ಟವು ಸಾಕಷ್ಟಿದೆ. ಹಿರೋಶಿಮಾ ಹಾಗೂ ನಾಗಸಾಕಿಯ ಮೇಲೆ ನಡೆದ ಅಣುಬಾಂಬ್ ದಾಳಿ ಮರೆಯಲಾಗದು. ವಿಜ್ಞಾನ ಹಾಗೂ ತಂತ್ರಜ್ಞಾನ ಬೆಳೆಯುತ್ತಿರುವ ವೇಗ ಗಮನಿಸಿದಾಗ ಅದರಿಂದ ಆಗಬಹುದಾದ ಪರಿಣಾಮವನ್ನು ಗಂಭೀರವಾಗಿ ಚಿಂತಿಸಬೇಕಿದೆ. ಈ ದಿಸೆಯಲ್ಲಿ ಧರ್ಮದ ತಳಹದಿಯ ಮೇಲೆ ವಿಜ್ಞಾನದ ಬೆಳವಣಿಗೆ ಹಾಗೂ ಮಾನವನ ಬದುಕು ನಡೆಯುವುದು ಅವಶ್ಯಕ ಎಂದರು.
ಈ ಸಂದರ್ಭದಲ್ಲಿ ಗೋಪುರ ಕಳಸ ಸ್ಥಾಪನೆ ಹಾಗೂ ದೇವಸ್ಥಾನ ಹಾಗೂ ಮಹಾದ್ವಾರದ ಉದ್ಘಾಟನೆಯನ್ನು ನಿರ್ಮಲಾನಂದಶ್ರೀ ನೆರವೇರಿಸಿದರು.
ಮೈಸೂರು ಶಾಖಾ ಮಠದ ಸೋಮನಾಥ ಸ್ವಾಮೀಜಿ, ಚುಂಚನಕಟ್ಟೆ ಶಾಖಾ ಮಠದ ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕರಾದ ಜಿ.ಟಿ. ದೇವೇಗೌಡ, ವಾಸು, ಮಾಜಿ ಶಾಸಕ ಪ್ರೊ. ಪಿ.ಎಂ. ಚಿಕ್ಕಬೋರಯ್ಯ, ನಗರ ಪಾಲಿಕ ಸದಸ್ಯರಾದ ಕೆ.ಟಿ. ಚೆಲುವೇಗೌಡ, ಶಿವಣ್ಣ, ಶಿವಮಾದು ಮುಖ್ಯ ಅತಿಥಿಗಳಾಗಿದ್ದರು. ವಿಧಾನ ಪರಿಷತ್ ಮಾಜಿ ಸದಸ್ಯ ಡಿ. ಮಾದೇಗೌಡ ಪ್ರಾಸ್ತಾವಿಕ ಮಾತುಗಳಾಡಿದರು.
ಸಂಘದ ಅಧ್ಯಕ್ಷ ಡಿ. ಮಾದೇಗೌಡ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಮಂಜುನಾಥ್ ಸ್ವಾಗತಿಸಿದರು. ಜಯರಾಮ್ ನಿರೂಪಿಸಿದರು. ನಂತರ ಅನ್ನದಾನ ನಡೆಯಿತು.
ಶಿಬಿರ: ಮೈಸೂರು ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ಹಾಗೂ ಬಿಜಿಎಸ್ ಅಪೊಲೋ ಆಸ್ಪತ್ರೆ ಸಂಯುಕ್ತಾಶ್ರದಲ್ಲಿ ಏರ್ಪಡಿಸಿದ್ದ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಹೆಚ್ಚಿನ ಜನರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

