ದಸರಾ ಉದ್ಘಾಟನೆಗೆ ಕಂಬಾರ: ಸ್ವಾಗತ
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಲ ಸ್ವಾಗತಿಸಿದೆ. ಅತಿ ಹಿಂದುಳಿದ ಸಮಾಜಗಳಲ್ಲಿ ಒಂದಾದ ವಿಶ್ವಕರ್ಮ ಸಮಾಜಕ್ಕೆ ಸೇರಿದ ಸಾಹಿತಿ ಡಾ. ಚಂದ್ರಶೇಖರ ಕಂಬಾರರ ಅವರನ್ನು ಆಹ್ವಾನಿಸಿರುವುದು ನಮಗೆಲ್ಲ ಸಂತೋಷ ತಂದಿದೆ. ಈ ಮೂಲಕ ಮುಖ್ಯಮಂತ್ರಿಯವರು ಹಿಂದುಳಿದ ವರ್ಗಗಳ ಶ್ರೇಯೋಭಿಲಾಷೆಗಳಿಗೆ ಮಾನ್ಯತೆ ನೀಡಿದ್ದಾರೆ ಎಂದು ಮಹಾಮಂಡಲದ ಜಿಲ್ಲಾಧ್ಯಕ್ಷ ಸಿ.ಟಿ. ಆಚಾರ್ಯ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಇತ್ತೀಚೆಗೆ ಮಂಡಿಸಿದ ಬಜೆಟ್ನಲ್ಲಿ ವಿಶ್ವಕರ್ಮ ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ 5 ಕೋಟಿ ಮೀಸಲಿಡುವ ಬಗ್ಗೆ ಪ್ರಸ್ತಾಪ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ವಿಶ್ವಕರ್ಮ ಸಮಾಜದಿಂದ ಅಭಿನಂದಿಸುತ್ತೇವೆ. ಈ ಸಂಬಂಧ ಸದ್ಯದಲ್ಲಿಯೇ ಮೈಸೂರಿನಲ್ಲಿ ಸಮಾಜದಿಂದ ಅಭಿನಂದನಾ ಸಮಾರಂಭ ಆಯೋಜಿಸುವ ಬಗ್ಗೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಈ ಅಭಿವೃದ್ಧಿ ನಿಗಮಕ್ಕೆ ಸಮಾಜಕ್ಕೆ ಸೇವೆ ಸಲ್ಲಿಸಿರುವ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಿ ಅಧ್ಯಕ್ಷರನ್ನಾಗಿ ನೇಮಿಸುವಂತೆ ಒತ್ತಾಯಿಸಿದರು. ಪದಾಧಿಕಾರಿಗಳಾದ ಆರ್. ಜಯಕುಮಾರ್, ಎ. ಗೋಪಾಲಚಾರ್, ಎಸ್. ಕುಮಾರ್, ಯೋಗಣ್ಣ, ಎಸ್. ನರಸಿಂಹಮೂರ್ತಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

