ಎನ್ಎಸ್ಎಸ್ನಿಂದ ಆದರ್ಶ ಸಮಾಜ: ಪುಟ್ಟು
ಕ.ಪ್ರ.ವಾರ್ತೆ , ಮೈಸೂರು , ಆ. 21
ಆದರ್ಶ ಸಮಾಜ ನಿರ್ಮಾಣಕ್ಕೆ ಎನ್ಎಸ್ಎಸ್ ಸಹಕಾರಿ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಎಂ. ಪುಟ್ಟು ಹೇಳಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ತುಂಗಭದ್ರಾ ಸಭಾಂಗಣದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಕೆ.ಆರ್. ಸಾಗರ ಸರ್ಕಾರಿ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ಮೈಸೂರು ವಿಭಾಗದ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿಗಳ ಪುನಶ್ಚೇತನ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಪನ್ಯಾಸಕರಾದ ನಾವು ಕಲಿತಾಗ ಮಾತ್ರ ಮಕ್ಕಳಿಗೆ ಕಲಿಸಲು ಸಾಧ್ಯ. ಯುವಕರು ದುಶ್ಚಟಗಳಿಗೆ ದಾಸರಾಗದಂತೆ ನೋಡಿಕೊಳ್ಳಲು ಎನ್ಎಸ್ಎಸ್ ಸಹಕಾರಿಯಾಗಿದೆ. ಎನ್ಎಸ್ಎಸ್ ಶಿಬಿರಗಳ ಮೂಲಕ ಯುವಕರಲ್ಲಿ ಬದಲಾವಣೆ ತಂದರೆ ಮಾತ್ರ ಆದರ್ಶ ಸಮಾಜ ನಿರ್ಮಾಣ ಮಾಡಬಹುದು. ಆದ್ದರಿಂದ ನಾವು ಜವಾಬ್ದಾರಿ ಅರಿತುಕೊಳ್ಳಬೇಕು ಎಂದರು. ಎನ್ಎಸ್ಎಸ್ನ ರಾಜ್ಯ ಸಂಯೋಜನಾಧಿಕಾರಿ ವಿ. ಕೃಷ್ಣ ಪರಮಾತ್ಮ ಮಾತನಾಡಿ, ರಾಜ್ಯದಲ್ಲಿ 4,500 ಪದವಿಪೂರ್ವ ಕಾಲೇಜುಗಳ ಪೈಕಿ 780 ಪದವಿಪೂರ್ವ ಕಾಲೇಜುಗಳಲ್ಲಿ ಮಾತ್ರ ಎನ್ಎಸ್ಎಸ್ ಘಟಕ ಇದೆ. ಈ ಸಂಖ್ಯೆಯನ್ನು 1 ಸಾವಿರಕ್ಕೆ ವಿಸ್ತರಿಸಬೇಕು ಎಂದು ಮನವಿ ಮಾಡಲಾಗಿದೆ. ಆಲ್ಲದೆ, ಕಳೆದ ಬಾರಿ ಸುಮಾರು 70 ಕಾಲೇಜುಗಳು ಶಿಬಿರ ನಡೆಸುವುದಿಲ್ಲ ಎಂದು ಅನುದಾನವನ್ನು ಹಿಂದಕ್ಕೆ ಕಳುಹಿಸಿದವು. ಉಪನ್ಯಾಸಕರಿಗೆ ಒಂದು ವಾರ ತೊಂದರೆ ಆಗಬಹುದು. ಆದರೆ, ಯುವಕರನ್ನು ಬದಲಾಯಿಸಬೇಕು ಎಂಬ ಉದ್ದೇಶಕ್ಕಾದರೂ ಶಿಬಿರ ನಡೆಸಿ ಎಂದು ಮನವಿ ಮಾಡಿದರು.
ಮುಕ್ತ ವಿವಿ ಕುಲಸಚಿವ ಪ್ರೊ. ಪಿ.ಎಸ್. ನಾಯಕ್ ಕಾರ್ಯಾಗಾರ ಉದ್ಘಾಟಿಸಿದರು. ಬೆಳಗಾವಿ ವಿಭಾಗದ ಸಹಾಯಕ ಸಂಯೋಜನಾಧಿಕಾರಿ ಪಿ.ಎಸ್. ಗಿರಿರಾಜ್ ಪ್ರಾಸ್ತಾವಿಕ ಭಾಷಣ ಮಾಡಿದರು. ಸಂಯೋಜನಾಧಿಕಾರಿ ಎನ್.ಆರ್. ಚಂದ್ರೇಗೌಡ, ಗುಲ್ಬರ್ಗ ಸಹಾಯಕ ಸಂಯೋಜನಾಧಿಕಾರಿ ಎಸ್. ಶಿವರಾಜ್, ಸಂಘಟಕ ಸಿ.ಆರ್. ದಿನೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

