ಮೈಸೂರು

ಕನ್ನಡ ದಿನಪತ್ರಿಕೆ ಕೊಂಡು ಓದಿ: ರಾಮಲಿಂಗು

Published On :

ಕ.ಪ್ರ.ವಾರ್ತೆ ,  ಪಿರಿಯಾಪಟ್ಟಣ ,  ಆ. 23
ಕನ್ನಡ ದಿನಪತ್ರಿಕೆಗಳನ್ನು ಹಣಕೊಟ್ಟು ಕೊಂಡು ಓದುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಲಿಂಗು ಕರೆ ನೀಡಿದರು.
ಇಲ್ಲಿನ ಬಿಆರ್‌ಸಿ ಕಚೇರಿ ಆವರಣದಲ್ಲಿ ಕಸಾಪ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಅರ್ಜಿ ನೀಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಮಾತೃಭಾಷೆಯ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಗೌರವವಿರಬೇಕು. ಕನಿಷ್ಠ ಪಕ್ಷ ರಾಜ್ಯದ ಪ್ರಾದೇಶಿಕ ಭಾಷೆಯಾದ ಕನ್ನಡದ ಪತ್ರಿಕೆಗಳನ್ನು ಹಣಕೊಟ್ಟು ಕೊಂಡುಕೊಂಡು ಓದುವಂತಾಗಬೇಕು. ಪ್ರತಿಯೊಬ್ಬರೂ ಕನ್ನಡದ ವಾಹಿನಿಗಳನ್ನು ವೀಕ್ಷಿಸುವ ಮೂಲಕ ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು.
ನೆರೆಹೊರೆಯ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಪ್ರಾದೇಶಿಕ ಭಾಷೆಯ ಬಗ್ಗೆ ರಾಜ್ಯದ ಜನತೆಯಲ್ಲಿ ಹೆಚ್ಚು ಅಭಿಮಾನ ಕಂಡುಬರುತ್ತಿಲ್ಲ. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಶೇ. 30 ರಷ್ಟು ಮಾತ್ರ ಕನ್ನಡ ಮಾತನಾಡುವ ಜನರನ್ನು ಮಾತ್ರ ಕಾಣಬಹುದಾಗಿದ್ದು, ಇದು ಬೇಸರದ ಸಂಗತಿಯಾಗಿದೆ ಎಂದು ಹೇಳಿದರು.
ಕಸಾಪ ತಾ. ಅಧ್ಯಕ್ಷ ಗೋರಳ್ಳಿ ಜಗದೀಶ್ ಮಾತನಾಡಿ, ಸೆ. 10 ರೊಳಗೆ ಕಸಾಪಗೆ ತಾಲೂಕಿನಿಂದ ಒಂದು ಸಾವಿರ ಸದಸ್ಯರನ್ನು ನೋಂದಣಿ ಮಾಡುವ ಗುರಿ ಹೊಂದಿದೆ. ಹೆಚ್ಚಿನ ಜನರು ಪರಿಷತ್ತಿನ ಸದಸ್ಯತ್ವ ಹೊಂದುವ ಮೂಲಕ ಕನ್ನಡದ ಚಟುವಟಿಕೆಗಳಿಗೆ ಕೈಜೋಡಿಸುವಂತೆ ಮನವಿ ಮಾಡಿದರು.
ಬಿಆರ್‌ಸಿ  ಬಿ.ಸಿ. ರೇವಣ್ಣ ಮಾತನಾಡಿದರು. ಸರ್ಕಾರಿ ನೌಕರರ ಬಳಕೆದಾರರ ಸಂಘದ ತಾ. ಅಧ್ಯಕ್ಷ ಮುದ್ದಣ್ಣಾಚಾರ್, ಉಪ ಪ್ರಾಂಶುಪಾಲ ನಾಗಶೆಟ್ಟಿ, ಸರ್ಕಾರಿ ನೌಕರರ ತಾ. ಸಂಘದ ನಿರ್ದೇಶಕ ಪರಶಿವಯ್ಯ, ಬಿಆರ್‌ಪಿ, ಸಿಆರ್‌ಪಿ ಹಾಗೂ ಶಿಕ್ಷಕರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.