ಸೆ. 1ರಂದು ಸಹಕಾರ ಸಂಘಕ್ಕೆ ಚುನಾವಣೆ
ಕ.ಪ್ರ.ವಾರ್ತೆ , ಕೆ.ಆರ್. ನಗರ , ಆ. 23
ತಾಲೂಕಿನ ಹೊಸೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ನ ಆಡಳಿತ ಮಂಡಳಿಯ 10 ನಿರ್ದೇಶಕ ಸ್ಥಾನಗಳಿಗೆ ಸೆ. 1 ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಶುಕ್ರವಾರ ಒಟ್ಟು 32 ಮಂದಿ ಆಯ್ಕೆ ಬಯಸಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಆ. 26ರಂದು ವಾಪಸ್ಸಾತಿಗೆ ಕಡೆಯ ದಿನವಾಗಿದ್ದು, ಸೆ. 1ರಂದು ಬೆಳಗ್ಗೆ 8 ರಿಂದ ಸಂಜೆ 5ರವರೆಗೆ ಮತದಾನ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ. ಸಾಲಗಾರರ ಕ್ಷೇತ್ರದ 9 ಸ್ಥಾನಗಳಿಗೆ 960 ರೈತ ಸದಸ್ಯರು ಮತ್ತು ಸಾಲಗಾರರಲ್ಲದ ಒಂದು ಸ್ಥಾನಕ್ಕೆ 510 ಸಾಮಾನ್ಯ ಸದಸ್ಯರು ಮತ ಚಲಾಯಿಸಲಿದ್ದಾರೆ.
ತಾಲೂಕಿನಲ್ಲಿ ಉತ್ತಮ ಹೆಸರು ಗಳಿಸಿರುವ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ಪೈಪೋಟಿ ಆರಂಭವಾಗಿದ್ದು, ಜೆಡಿಎಸ್, ಕಾಂಗ್ರೆಸ್ ಮುಖಂಡರು ತಂಡ ರಚಿಸಿಕೊಂಡು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತಯಾರಿ ಆರಂಭಿಸಿದ್ದು, ಗೆಲ್ಲುವ ಸಾಮರ್ಥ್ಯ ಹೊಂದಿರುವವರನ್ನು ಹುಡುಕುತ್ತಿವೆ.
ಹೊಸೂರು, ಹಳೆಯೂರು, ಸಾಲೆಕೊಪ್ಪಲು, ದಿಡ್ಡಹಳ್ಳಿ, ಕುಪ್ಪೆ, ಚಿಕ್ಕಕೊಪ್ಪಲು, ದೊಡ್ಡಕೊಪ್ಪಲು, ಚುಂಚನಕಟ್ಟೆ, ಜವರೇಗೌಡನಕೊಪ್ಪಲು, ಮುದ್ದನಹಳ್ಳಿ ಸೇರಿದಂತೆ 11 ಗ್ರಾಮಗಳ ವ್ಯಾಪ್ತಿಗೆ ಒಳಪಡುವ ಬ್ಯಾಂಕ್ ವಾರ್ಷಿಕ ಮೂರು ಕೋಟಿಗೂ ಅಧಿಕ ವಹಿವಾಟು ನಡೆಸಲಿದ್ದು, ಈ ಭಾಗದ ಜನರ ಜೀವನಾಡಿಯಾಗಿದೆ.
ಜಿದ್ದಾಜಿದ್ದಿನ ಸ್ಪರ್ಧೆ: ಹೊಸೂರು ಸಹಕಾರ ಬ್ಯಾಂಕ್ ಆಡಳಿತ ಮಂಡಳಿಯ ಚುನಾವಣೆ ಎಂದರೆ ಹಿಂದಿನಿಂದಲೂ ರಾಜಕೀಯ ಪಕ್ಷಗಳಿಗೆ ಜಿದ್ದಾಜಿದ್ದಿನ ಕಣವಾಗಿ ಮಾರ್ಪಡಲಿದ್ದು, ಸ್ಪರ್ಧೆ ತುರುಸಿನಿಂದ ಕೂಡಿರುತ್ತದೆ. ಈ ಬಾರಿಯೂ ಪ್ರಮುಖರು ಸ್ಪರ್ಧಿಸಿದ್ದು, ಚುನಾವಣಾ ಕಣ ರಂಗೇರಿದೆ.
ಗಳಿಗೆಕೆರೆ: ಇಲ್ಲಿನ ಕೃಷಿ ಪತ್ತಿನ ಸಹಕಾರ ಸಂಘಕ್ಕೂ ಅ. 1 ರಂದು ಚುನಾವಣೆ ನಡೆಯಲಿದೆ. ಒಟ್ಟು 10 ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಈಗಾಗಲೇ ಚುನಾವಣಾ ಪ್ರಕ್ರಿಯೆ ಆರಂಭಗೊಂಡಿದ್ದು, ನಾಮಪತ್ರ ಸಲ್ಲಿಕೆಗೆ ಅ. 24 ಕಡೆಯ ದಿನವಾಗಿದೆ. ಸಾಲಗಾರರ 9 ಸ್ಥಾನ ಮತ್ತು ಸಾಲಗಾರರಲ್ಲದ ಒಂದು ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, 705 ಮಂದಿ ಸಾಲಗಾರ ಸದಸ್ಯರು 107 ಮಂದಿ ಸಾಮಾನ್ಯ ಸದಸ್ಯರು ಮತದಾನದ ಹಕ್ಕು ಹೊಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

