ಮೈಸೂರು

ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ

Published On :

ಕ.ಪ್ರ.ವಾರ್ತೆ ಕೆ.ಆರ್. ನಗರ ಆ. 24
ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಮ್ಯಾ ಜಯ ಗಳಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪುರಸಭಾ ವೃತ್ತದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಕಾಂಗ್ರೆಸ್‌ನ ನೂರಾರು ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದು, ಕಾಂಗ್ರೆಸ್‌ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಯಘೋಷ ಮೊಳಗಿಸುತ್ತಾ ಇಲ್ಲಿನ ಪ್ರಮುಖ ವೃತ್ತಗಳಲ್ಲಿ ಬೈಕ್ ರ್ಯಾಲಿ ನಡೆಸಿದರು.
ಕಾಂಗ್ರೆಸ್ ಮುಖಂಡ ದೊಡ್ಡಸ್ವಾಮೇಗೌಡ ಮಾತನಾಡಿ, ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ನಂತರ ಜಾರಿಗೆ ತಂದ ಜನಪರ ಕಾರ್ಯಕ್ರಮಗಳಿಗೆ ಮತದಾರರು ಒಪ್ಪಿಗೆಯ ಮುದ್ರೆ ಒತ್ತಿದ್ದು, ಈ ಫಲಿತಾಂಶ ಮುಂದಿನ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದರು. ಚುನಾವಣೆಯಲ್ಲಿ ಕೋಮುವಾದಿಗಳೊಂದಿಗೆ ಕೈ ಜೋಡಿಸಿ ಕಾಂಗ್ರೆಸ್ ಸೋಲಿಗೆ ಯತ್ನಿಸಿದ್ದ ನಾಯಕರಿಗೆ ಮತದಾರ ತಕ್ಕ ಉತ್ತರ ನೀಡಿದ್ದು, ನಿರೀಕ್ಷೆಯಂತೆ ಪಕ್ಷ ಉತ್ತಮ ಸಾಧನೆ ಮಾಡಿದೆ. ಮುಂಬರುವ ಎಲ್ಲ ಚುನಾವಣೆಗಳಿಗೂ ಇದು ಸ್ಪಷ್ಟ ಗೆಲವಿನ ಮುನ್ನಡಿಯಾಗಿದೆ.
ನಾಳಿನ ವಿಧಾನ ಪರಿಷತ್ ಚುನಾವಣಾ ಫಲಿತಾಂಶದಲ್ಲಿಯೂ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜಿಪಂ ಮಾಜಿ ಸದಸ್ಯ ಡಿ.ರವಿಶಂಕರ್, ಪುರಸಭಾ ಮಾಜಿ ಅಧ್ಯಕ್ಷ ನರಸಿಂಹರಾಜು, ತಾಪಂ ಮಾಜಿ ಉಪಾಧ್ಯಕ್ಷ ಚೀರ್ನಹಳ್ಳಿ ಉಮೇಶ್, ಸಿ.ಕೆ.ಬಸವರಾಜು, ಅಹಿಂದ ಸಂಚಾಲಕ ಪ್ರಕಾಶ್, ಶ್ರೀನಿವಾಸ್, ಅಬ್ಬಾಯಿನಾಯ್ಡು, ಯುವಕ ಸಂಘದ ಅಧ್ಯಕ್ಷ ನಾರಾಯಣ, ತಾಲೂಕು ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಜಿ.ಎಂ. ಹೇಮಂತ್, ಕಾಂಗ್ರೆಸ್ ಮುಖಂಡರಾದ ದಿಡ್ಡಹಳ್ಳಿ ಬಸವರಾಜು, ಮಂಚನಹಳ್ಳಿ ಅನಂತ್, ಸಿ.ಕೆ. ಬಸವರಾಜು, ಚೀರ್ನಹಳ್ಳಿ ಶಿವಣ್ಣ, ನಾಗೇಂದ್ರ, ಡಿ. ವೆಂಕಟೇಶ್, ಧರ್ಮರಾಜು, ರಾಜು, ನಾಗರಾಜರಾವ್, ನಾಗರಾಜು, ಬಿ.ಎಸ್. ಪವನ್, ಅರುಣ್ ಕುಮಾರ್, ರೇವಣ್ಣ ಭಾಗವಹಿಸಿದ್ದರು.

ಪಟಾಕಿ ಸಿಡಿಸಿ ಸಿಹಿ ಹಂಚಿದ 'ಕೈ' ಕಾರ್ಯಕರ್ತರು
ಪಿರಿಯಾಪಟ್ಟಣ: ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ರಮ್ಯಾ ಹಾಗೂ ಡಿ.ಕೆ. ಸುರೇಶ್ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಬಸವೇಶ್ವರ ವೃತದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾನ್ಸೂನ್ ಚಂದ್ರು, ಬೆಟ್ಟದಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಂಜಣ್ಣ ಕಾರ್ನಾಡ್, ತಾಲೂಕು ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಂಜು, ರೋಟರಿ ಮಿಡ್‌ಟೌನ್ ಅಧ್ಯಕ್ಷ ಹರೀಶ್,  ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಷಫಿ, ಮುಖಂಡರಾದ ರವಿ, ಶಿವು, ಕೃಷ್ಣ, ನಾಗೇಶ್, ದೇವರಾಜ್, ಮಂಜು, ಮಹದೇವ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.