ಮೈಸೂರು

ಪ್ರೊ ಸುಧಾಕರ್‌ಗೆ ಕನ್ನಡ ಅಧ್ಯಯನ ಸಂಸ್ಥೆ ಶ್ರದ್ಧಾಂಜಲಿ

Published On :

ಕ.ಪ್ರ.ವಾರ್ತೆ ಮೈಸೂರು ಆ. 24
ಸಾಹಿತಿ ಪ್ರೊ. ಸುಧಾಕರ ಅವರ ನಿಧನದ ಗೌರವಾರ್ಥ ಮಾನಸಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಶನಿವಾರ ಶ್ರದ್ಧಾಂಜಲಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಜಾನಪದ ಹಾಗೂ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಪ್ರೊ. ಕಾಳೇಗೌಡ ನಾಗವಾರ, ಸುಧಾಕರರ ಕಥೆಗಳ ಕುರಿತು ಸ್ವತಃ ಪೂರ್ಣಚಂದ್ರ ತೇಜಸ್ವಿಯವರಿಗೂ ಕುತೂಹಲವಿತ್ತು. ವಿದ್ಯಾರ್ಥಿಗಳ ಪ್ರಿಯ ಗುರುಗಳಾಗಿದ್ದ ಅವರು, ಜಾತ್ಯಾತೀತ ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳನ್ನು ಕಾಣುತ್ತಿದ್ದರು ಎಂದು ಸ್ಮರಿಸಿದರು.
ಪ್ರೊ. ಸಿ.ಪಿ.ಸಿದ್ಧಾಶ್ರಮ ಮಾತನಾಡಿ, ಗ್ರಾಮೀಣ ಬದುಕನ್ನು ತಮ್ಮ ಕಥೆಗಳಲ್ಲಿ ತೆರೆದಿಟ್ಟ ಅವರಿಗೆ, ತನ್ನ ಕಥೆಗಳ ಬಗ್ಗೆ ಮತ್ತಷ್ಟು ಮಹತ್ವದ ಚರ್ಚೆಯಾಗಬೇಕಿತ್ತು ಎಂಬ ಕೊರಗಿತ್ತು. ಸುಧಾಕರ ಅವರು ದೈಹಿಕವಾಗಿ ಇಲ್ಲದಿದ್ದರೂ ಅವರ ಸಾಹಿತ್ಯ ಸೃಷ್ಟಿ ನಮ್ಮ ಮುಂದಿದೆ. ಅವರ ಸಮಗ್ರ ಸಾಹಿತ್ಯ ಕುರಿತು ವಿಚಾರ ಸಂಕಿರಣ ಏರ್ಪಡಿಸುವ ಅಗತ್ಯವಿದೆ ಎಂದರು.   
ಸಂಸ್ಥೆ ನಿರ್ದೇಶಕ ಪ್ರೊ. ನೀಲಗಿರಿ ತಳವಾರ್ ಮಾತನಾಡಿ, ಶೈಕ್ಷಣಿಕ ಚಟುವಟಿಕೆಯ ಮೂಲಕ ಸಂಸ್ಥೆಗೆ ಕೀರ್ತಿ ತಂದವರಲ್ಲಿ ಸುಧಾಕರ ಸಹ ಒಬ್ಬರು ಎಂದರು.
ಮೃತರ ಗೌರವಾರ್ಥ ಮೌನ ಆಚರಿಸಲಾಯಿತು. ಅಧ್ಯಾಪಕರು, ಅಧ್ಯಾಪಕೇತರರು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.