ಮುಂಬೈ ಘಟನೆ ಮರುಕಳಿಸದಿರಲಿ
ಕ.ಪ್ರ.ವಾರ್ತೆ ಮೈಸೂರು ಆ. 24
ಮುಂಬೈಯಲ್ಲಿ ಯುವ ಪತ್ರಿಕಾ ಛಾಯಾಗ್ರಾಹಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ಹಾಗೂ ಮಹಿಳೆಯರ ಮೇಲಿನ ಅಪರಾಧಗಳನ್ನು ವಿರೋಧಿಸಿ ಎಐಡಿಎಸ್ಒ, ಎಐಡಿವೈಎ ಮತ್ತು ಎಐಎಂಎಸ್ಎಸ್ ಕಾರ್ಯಕರ್ತರು ರಾಮಸ್ವಾಮಿ ವೃತ್ತದಲ್ಲಿ ಶನಿವಾರ ಪ್ರತಿಭಟಿಸಿದರು.
ಛಾಯಾಗ್ರಾಹಕಿ ಮೇಲೆ ಅತ್ಯಾಚಾರ ಎಸಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ, ಶಿಕ್ಷೆಗೆ ಗುರಿಪಡಿಸಬೇಕು.
ಅತ್ಯಾಚಾರಕ್ಕೆ ಒಳಗಾದ ಯುವತಿಗೆ ವೈದ್ಯಕೀಯ ವೆಚ್ಚ ಸೇರಿದಂತೆ ಅಗತ್ಯ ನೆರವನ್ನು ಸರ್ಕಾರ ಒದಗಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ವಹಿಸಲು ಸೂಕ್ತ ಸಮಿತಿ ರಚಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿರುವ ಎಲ್ಲ ರೀತಿಯ ಅಶ್ಲೀಲ ಚಿತ್ರಗಳು, ಸಾಹಿತ್ಯಗಳನ್ನು ನಿಷೇಧಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು. ಇಂತಹ ನೀಚ ಕೃತ್ಯಗಳ ವಿರುದ್ಧ ಪ್ರತಿಭಟಿಸಲು ಜನ ಮುಂದಾಗಬೇಕು ಎಂದು ಕರೆ ನೀಡಿದರು.
ಹಾರ್ಡ್ವೀಕ್ ಪಿಯು ಕಾಲೇಜು, ಮಹಾರಾಜ ಮತ್ತು ಮಹಾರಾಣಿ ಕಾಲೇಜು ಪತ್ರಿಕೋದ್ಯಮ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಮುಖಂಡರಾದ ಸೀಮಾ, ಎಂ. ಶಶಿಧರ್, ಪೂರ್ಣಿಮಾ, ಶಿಬಾ, ಸುಮ ಇದ್ದರು.
ಪತ್ರಿಕಾ ಛಾಯಾಗ್ರಾಹಕರು: ಮುಂಬೈ ಯುವ ಪತ್ರಿಕಾ ಛಾಯಾಗ್ರಾಹಕಿ ಮೇಲೆ ನಡೆದ ಅತ್ಯಾಚಾರವನ್ನು ಖಂಡಿಸಿ ಹಾಗೂ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಮೈಸೂರಿನ ಪತ್ರಿಕಾ ಛಾಯಾಗ್ರಾಹಕರು ಮತ್ತು ವರದಿಗಾರರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.
ಪತ್ರಿಕಾ ಛಾಯಾಗ್ರಾಹಕರಾದ ಲಕ್ಷ್ಮಿನಾರಾಯಣ ಯಾದವ್, ಹಂಪಾ ನಾಗರಾಜ್, ಎಸ್.ಆರ್. ಮಧುಸೂದನ್, ಅನುರಾಗ ಬಸವರಾಜು, ನಂದನ್, ಕೃಷ್ಣೋಜಿ ರಾವ್, ಗವಿಮಠ ರವಿ, ಗುರು, ಸೂರ್ಯ (ವೈರಮುಡಿ), ಮಧು, ನಾಗೇಶ್, ರಂಗಸ್ವಾಮಿ, ಮಹದೇವಮೂರ್ತಿ, ದಿನೇಶ್, ರಾಘವೇಂದ್ರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

