ಮೈಸೂರು

ವಕೀಲರಿಂದ ಹಲ್ಲೆ: ದೂರು ದಾಖಲು

Published On :

ಕ.ಪ್ರ.ವಾರ್ತೆ ,  ಪಿರಿಯಾಪಟ್ಟಣ ,  ಆ. 25
ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ನೌಕರನ ಮೇಲೆ ವಕೀಲರೊಬ್ಬರು ಹಲ್ಲೆ ನಡೆಸಿರುವ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪಟ್ಟಣದಲ್ಲಿರುವ ತಾಲೂಕು ಆಡಳಿತ ಭವನದಲ್ಲಿ ಸಾಂಖ್ಯಿಕ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗವಿಕಲ ನೌಕರ ಕೃಷ್ಣ ಎಂಬವರು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ವಕೀಲ ಕೆ. ಭಾಸ್ಕರ್ ಎಂಬವರು ಜನನ ಪ್ರಮಾಣ ಪತ್ರಕ್ಕೆ ಸಂಬಂಧಿಸಿದ ವಿಚಾರವಾಗಿ ಗಲಾಟೆ ಮಾಡಿ ಹಲ್ಲೆ ನಡೆಸಿದ್ದರು. ಈ ಸಂಬಂಧ ತಮ್ಮ ಮೇಲೆ ಹಲ್ಲೆ ನಡೆಸಿದರಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದರು ಎಂದು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶನಿವಾರ ಸಂಜೆ ದೂರು ದಾಖಲಿಸಿದ್ದಾರೆ.
ಪ್ರತಿ ದೂರು: ವಕೀಲ ಕೆ. ಭಾಸ್ಕರ್ ಸಹ ಪ್ರತಿ ದೂರು ದಾಖಲಿಸಿದ್ದು, ತಾವು ಜನನ ಪ್ರಮಾಣಪತ್ರ ಪಡೆಯಲು ಹೋದ ಸಂದರ್ಭದಲ್ಲಿ ಕೃಷ್ಣ ಮತ್ತು ದೇವಯ್ಯ ಎಂಬುವರು ತಮ್ಮನ್ನು ಬೈದು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿದ್ದಾರೆ.
ತಹಸೀಲ್ದಾರ್ ಭೇಟಿ: ಹಲ್ಲೆಗೊಳಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಗವಿಕಲ ಸರ್ಕಾರಿ ನೌಕರ ಕೃಷ್ಣ ಅವರನ್ನು ತಹಸೀಲ್ದಾರ್ ಎಂ.ಕೆ. ಸವಿತಾ ಭೇಟಿ ನೀಡಿ ಆರೋಗ್ಯ ವಿಚಾರಿಸಿದರಲ್ಲದೆ ಕಾನೂನು ರೀತಿಯಲ್ಲಿ ರಕ್ಷಣೆ ನೀಡುವುದಾಗಿ ಭರವಸೆ ನೀಡಿದರು.
ಬಾರ್ ಕೌನ್ಸಿಲ್‌ಗೆ ದೂರು: ವಕೀಲ ವೃತ್ತಿಯಲ್ಲಿದ್ದುಕೊಂಡು ಕಾನೂನನ್ನು ಗೌರವಿಸದೆ ಅಂಗವಿಕಲ ನೌಕರನ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ತಪ್ಪು ಮಾಡಿರುವ ವಕೀಲರ ಬಗ್ಗೆ ರಾಜ್ಯ ಬಾರ್ ಕೌನ್ಸಿಲ್‌ಗೆ ದೂರು ನೀಡಿ ಅವರ ಸದಸ್ಯತ್ವ ರದ್ದುಪಡಿಸುವಂತೆ ಪತ್ರ ಬರೆಯುವುದಾಗಿ ತಹಸೀಲ್ದಾರ್ ಎಂ.ಕೆ. ಸವಿತಾ ಸುದ್ದಿಗಾರರಿಗೆ ತಿಳಿಸಿದರು. ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಂ.ಕೆ. ಪ್ರಕಾಶ್, ಪದಾಧಿಕಾರಿಗಳಾದ ಶಿವಯೋಗಿ, ಮುದ್ದಣ್ಣಚಾರ್, ಪದ್ಮನಾಭ್, ನೌಕರರಾದ ಎಂ.ಕೆ. ಪ್ರದೀಪ್, ಕಿರಣ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.