ನಟ ಜಗ್ಗೇಶ್ ಕಾರು ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ
ಮೈಸೂರು: ಚಲನಚಿತ್ರ ನಟ ಜಗ್ಗೇಶ್ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡಿರುವ ಘಟನೆ ಚಾಮುಂಡಿ ಬೆಟ್ಟದಲ್ಲಿ ಸೋಮವಾರ ನಡೆದಿದೆ.
ಕನಕಗಿರಿ ನಿವಾಸಿ ಗೋಪಾಲ್ (24) ಗಾಯಗೊಂಡವರು. ಜಗ್ಗೇಶ್ ಮತ್ತು ಕುಟುಂಬದ ಸದಸ್ಯರು ಚಾಮುಂಡಿ ಬೆಟ್ಟಕ್ಕೆ ಪೂಜೆ ಸಲ್ಲಿಸಿ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಚಾಮುಂಡಿ ಬೆಟ್ಟಕ್ಕೆ ಸುಜುಕಿ ಆಸೆಸ್ ಸ್ಕೂಟರ್ನಲ್ಲಿ ತೆರಳುತ್ತಿದ್ದ ಗೋಪಾಲ್ ವೇಗವಾಗಿ ಬಂದ ಜಗ್ಗೇಶ್ ಅವರ ಕಾರು ಡಿಕ್ಕಿ ಹೊಡೆದಿದೆ.
ಅಪಘಾತ ಸಂಭವಿಸಿದ ಸ್ಥಳದಲ್ಲಿ ಕಾರಿನ ಚಾಲಕ ಕಾರನ್ನು ಸಂಪೂರ್ಣವಾಗಿ ಬಲಕ್ಕೆ ತಿರುಗಿಸಿದ್ದಾನೆ. ಇದರಿಂದಾಗಿ ಸ್ಕೂಟರ್ ಕಾರಿನ ಕೆಳಗೆ ಸಿಲುಕಿ ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್ ಗೋಪಾಲ್ ಸಣ್ಣ- ಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಅಲ್ಲದೆ, ಜಗ್ಗೇಶ್ ಅವರ ಕಾರು ಎಡಕ್ಕೆ ತಿರುಗಿದ್ದರೆ ಬೆಟ್ಟದ ಪ್ರಪಾತಕ್ಕೆ ಬೀಳುವ ಸಾಧ್ಯತೆ ಇತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಗೋಪಾಲ್ ಅವರನ್ನು ಚಿಕಿತ್ಸೆಗಾಗಿ ಗೋಪಾಲಗೌಡ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕೆ.ಆರ್. ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
31 ರೊಳಗೆ ಪ್ರತ್ಯೇಕ ಸಿಇಟಿ
ತುಮಕೂರು: ರಾಜ್ಯದ ಮೂರು ಜಿಲ್ಲೆಗಳಲ್ಲಿರುವ ಪಶು ವೈದ್ಯಕೀಯ ಕಾಲೇಜುಗಳಲ್ಲಿ ಪ್ರತ್ಯೇಕ ಸಿಇಟಿ ಮುಖಾಂತರ ಸೀಟುಗಳನ್ನು ಭರ್ತಿ ಮಾಡಲಾಗುವುದು ಎಂಬ ಇಂಗಿತವನ್ನು ಪಶು ಸಂಗೋಪನೆ ಸಚಿವ ಟಿ.ಬಿ. ಜಯಚಂದ್ರ ವ್ಯಕ್ತಪಡಿಸಿದರು. ಹಾಸನ, ಶಿವಮೊಗ್ಗ ಬೀದರ್ ಪಶು ವೈದ್ಯಕೀಯ ಕಾಲೇಜುಗಳಲ್ಲಿನ ಸೀಟುಗಳ ಭರ್ತಿಗೆ ಆ.31 ರೊಳಗೆ ಪ್ರತ್ಯೇಕ ಸಿಇಟಿ ನಡೆಸಲಾಗುವುದು ಎಂದರು. ಈ ಮೂರು ಕಾಲೇಜುಗಳ ರದ್ದು ಪಡಿಸಲಾಗಿದ್ದ ಮಾನ್ಯತೆ ಹಿಂಪಡೆದು 180 ಸೀಟುಗಳನ್ನು ಭರ್ತಿ ಮಾಡಲಾಗುವುದು. ಹೊಸದಾಗಿ ಗದಗ, ಅಥಣಿ, ಪುತ್ತೂರಿನಲ್ಲಿ ಪಶುವೈದ್ಯಕೀಯ ಕಾಲೇಜು ಸ್ಥಾಪಿಸುವ ಚಿಂತನೆ ಇದೆ ಎಂದರು.
ಪಶುವೈದ್ಯರ ಬೇಡಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ ಖಾಸಗಿ ಪಶುವೈದ್ಯಕೀಯ ಕಾಲೇಜು ಸ್ಥಾಪಿಸಲು ಅನುಮತಿ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಸಮಿತಿ ರಚಿಸಿ ಸಾಧಕ-ಬಾಧಕಗಳ ಕುರಿತು ಪರಿಶೀಲಿಸಲಾಗುವುದು ಎಂದರು. ಪಶುಸಂಗೋಪನೆ ಇಲಾಖೆಯಲ್ಲಿ 5200 ಹುದ್ದೆಗಳು ಖಾಲಿಯಿದ್ದು 914 ವೈದ್ಯರ ಕೊರತೆ ಇದೆ. ಈಗಾಗಲೇ 391 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು 262 ಅರ್ಜಿಗಳು ಬಂದಿವೆ. ಪಶು ಇಲಾಖೆ ಸಿಬ್ಬಂದಿಗೆ ಯುಜಿಸಿ ವೇತನ ನೀಡಲಾಗುವುದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

