ಮೈಸೂರು

ಭ್ರಷ್ಟಾಚಾರ ನಿಯಂತ್ರಣ ಕಾಯಿದೆಗೆ ಆಗ್ರಹ

Published On :

ಕ.ಪ್ರ.ವಾರ್ತೆ ,  ಮೈಸೂರು ,  ಆ. 26
ದೇಶದ ಅಭಿವೃದ್ಧಿಗೆ ಮಾರಕವಾಗುತ್ತಿರುವ ಭ್ರಷ್ಟಾಚಾರ ತಡೆಗಟ್ಟುವ ಹಿನ್ನೆಲೆಯಲ್ಲಿ ಬಲಿಷ್ಠ ಕಾಯಿದೆ ರೂಪಿಸುವಂತೆ ಒತ್ತಾಯಿಸಿ ಆ. 28 ರಂದು ನಗರದ ನ್ಯಾಯಾಲಯ ಮುಂಭಾಗದಲ್ಲಿರುವ ಗಾಂಧಿ ಪುತ್ಥಳಿ ಬಳಿ ಸಹಿ ಸಂಗ್ರಹ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಭ್ರಷ್ಟಾಚಾರ ವಿರೋಧಿ ಆಂದೋಲನ ವೇದಿಕೆ ರಾಜ್ಯಾಧ್ಯಕ್ಷ ಎಚ್.ಎನ್. ನಂಜುಂಡರಾಜು ತಿಳಿಸಿದರು. ದೇಶಕ್ಕೆ ಸ್ವಾತಂತ್ರ್ಯ ಬಂದು 67 ವರ್ಷ ಕಳೆದರೂ ಆರ್ಥಿಕ ಸಂಕಷ್ಟದಿಂದ ಹೊರಬರಲು ಸಾಧ್ಯವಾಗಿಲ್ಲ. ಆಹಾರ, ಆರೋಗ್ಯ, ಉದ್ಯೋಗ, ಶಿಕ್ಷಣ ಪಡೆದುಕೊಳ್ಳುವಲ್ಲಿ ಜನಸಾಮಾನ್ಯರು ಕಷ್ಟಪಡುತ್ತಿದ್ದಾರೆ. ಆಗಿಂದಾಗ್ಗೆ ಎದುರಾಗುತ್ತಿರುವ ಚುನಾವಣೆಗಳೂ ಆರ್ಥಿಕತೆಯ ಬುಡಕ್ಕೆ ಕೊಡಲಿಪೆಟ್ಟು ನೀಡುತ್ತಿವೆ. ಇಂತಹ ಸಂದರ್ಭದಲ್ಲಿ ಚುನಾವಣೆಯಲ್ಲಿ ಗೆಲ್ಲಲು ಅಭ್ಯರ್ಥಿಗಳು ನಾನಾ ಮಾರ್ಗ ಅನುಸರಿಸಿ ಭ್ರಷ್ಟಾಚಾರದಲ್ಲಿ ತೊಡಗುತ್ತಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಪ್ರಥಮ ಪ್ರಯತ್ನವಾಗಿ ಮಾಹಿತಿ ಹಕ್ಕು ಕಾಯಿದೆ ಜಾರಿಗೆ ಬಂದಿತು. ಅದರ ಫಲವಾಗಿ ಜನಾಸಾಮಾನ್ಯರು ಸಹಾ ಆಡಳಿತದಲ್ಲಿ ಭಾಗಿಯಾಗಲು ಸಾಧ್ಯವಾಯಿತು.ರಾಜಕಾರಣಿಗಳ ಮತ್ತು ಅಧಿಕಾರಿಗಳ ಭ್ರಷ್ಟಾಚಾರ ಬಯಲಾಗಿದೆ. ಇದರಿಂದ ಭಯಗೊಂಡ ಭ್ರಷ್ಟಾಚಾರಿಗಳು ಖಜಾನೆ ಸಂಪತ್ತು ಮಾಹಿತಿಯನ್ನು ಹೊರ ಹಾಕಬೇಕಾಗುತ್ತದೆ ಎಂಬ ಭಾವನೆಯಿಂದ ರಾಜಕೀಯ ಪಕ್ಷಗಳನ್ನು ಆರ್‌ಟಿಐನಿಂದ ಹೊರಗಿಟ್ಟಿವೆ. ಇದನ್ನು ಪ್ರತಿಯೊಬ್ಬ ನಾಗರಿಕನೂ ಖಂಡಿಸಬೇಕಾಗುತ್ತದೆ ಎಂದರು. ಪದಾಧಿಕಾರಿಗಳಾದ ದ್ಯಾವಪ್ಪನಾಯಕ, ಸಾಹುಕಾರ್‌ಹುಂಡಿ ಸಿ. ಮಹದೇವು, ಪ್ರಭಾಕರ್, ನಿರ್ಮಲಕುಮಾರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.