ಮೈಸೂರು

'ಸ್ಪರ್ಧಾ ಜಗತ್ತಿನಲ್ಲಿ ಇಂಗ್ಲಿಷ್ ಮುಖ್ಯ'

Published On :

ಕ.ಪ್ರ.ವಾರ್ತೆ ,  ಮೈಸೂರು ,  ಆ. 26
ಸ್ಪರ್ಧಾ ಜಗತ್ತಿನಲ್ಲಿ ಇಂಗ್ಲಿಷ್ ಮುಖ್ಯವಾಗಿದೆ ಎಂದು ಮೈಸೂರು ವಿವಿ ಕುಲಸಚಿವ ಪ್ರೊ. ಸಿ. ಬಸವರಾಜು ಅಭಿಪ್ರಾಯಪಟ್ಟರು.
ಮೈವಿವಿ ಸಾಮರ್ಥ್ಯಾಭಿವೃದ್ಧಿ ಮತ್ತು ಉದ್ಯೋಗವಕಾಶಗಳ ಸೇವಾ ಕೇಂದ್ರವು ಸಂಶೋಧಕರಿಗಾಗಿ ಸೋಮವಾರ ಏರ್ಪಡಿಸಿದ್ದ ಇಂಗ್ಲಿಷ್ ಸಂವಹನ ವಿಶೇಷ ತರಗತಿಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಬಹುರಾಷ್ಟ್ರೀಯ ಕಂಪನಿಗಳು ಸಂದರ್ಶನ ನಡೆಸುವಾಗ ಇಂಗ್ಲಿಷ್ ಉಚ್ಚಾರಣೆ, ಸ್ಪಷ್ಟತೆ, ಸಂವಹನ ಕೌಶಲ್ಯವನ್ನು ಮಾನದಂಡವಾಗಿ ಪರಿಗಣಿಸುತ್ತದೆ ಎಂದರು.
ಕೇಂದ್ರ ಸೇವಾ ಆಯೋಗವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶೇ. 92 ರಷ್ಟು ಮಂದಿ ಪಾಸಾದರೂ ಸಂದರ್ಶನದಲ್ಲಿ ಅನುತ್ತೀರ್ಣರಾಗುತ್ತಾರೆ.
ಅವರಿಗೆ ನಿರರ್ಗಳವಾಗಿ ಮಾತನಾಡುವುದುಕ್ಕೆ ಬರುವುದೇ ಇಲ್ಲ. ಹೀಗಾಗಿ ಯುಪಿಎಸ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆ ಕಳಪೆಯಾಗುತ್ತಿದೆ. ಅಧ್ಯಾಪಕರು ಅಷ್ಟೆ ಬರೀ ಪಠ್ಯಕ್ರಮವನ್ನೇ ಬೋಧಿಸುವುದಲ್ಲ. ವಿದ್ಯಾರ್ಥಿಗಳಿಗೆ ಮಾತನಾಡುವುದನ್ನು ಕಲಿಸಬೇಕು ಎಂದು ತಿಳಿಸಿದರು. ಸಿಪಿಡಿಪಿಎಸ್ ನಿರ್ದೇಶಕ ಡಾ. ನಿರಂಜನ ವಾನಳ್ಳಿ, ಕಾರ್ಯಕ್ರಮ ಸಂಯೋಜಕಿ ಗೀತಲತಾ ಅತಿಥಿಯಾಗಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.