ಮೈಸೂರು

ಗಜಪಯಣ ಸಮಾರಂಭ ಪೂರ್ವಸಿದ್ಧತಾ ಸಭೆ

Published On :

ಕ.ಪ್ರ.ವಾರ್ತೆ ,  ಹುಣಸೂರು ,  ಆ. 26
ಮೈಸೂರು ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳ ಮೊದಲ ತಂಡ ಹುಣಸೂರು ತಾಲೂಕಿನ ನಾಗಪುರ ಗಿರಿಜನ ಪುನರ್ವಸತಿ ಕೇಂದ್ರದ ಆಶ್ರಮ ಶಾಲೆ ಬಳಿಯಿಂದ ಆ. 28 ರಂದು ಹೊರಡಲಿದ್ದು, ಅದಕ್ಕೆ ಬೇಕಾದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮೈಸೂರು ವನ್ಯಜೀವಿ ವಿಭಾಗದ ಡಿಎಫ್‌ಒ ಎಸ್.ಎನ್. ದೇವರಾಜು ಹೇಳಿದರು.
ಇಲ್ಲಿನ ತಹಸೀಲ್ದಾರ್ ಕಚೇರಿಯಲ್ಲಿ ಸೋಮವಾರ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಸಿದ್ಧತಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗಜಪಯಣ ಸಮಾರಂಭಕ್ಕೆ ಎರಡು ಸಾವಿರ ಜನಸಂಖ್ಯೆ ಭಾಗವಹಿಸುವ ನಿರೀಕ್ಷೆ ಇದೆ. ಬರುವ ಗಣ್ಯರು ಮತ್ತು ಅಧಿಕಾರಿಗಳು, ಮುಖಂಡರಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮ: ಬೆಳಗ್ಗೆ 10.30ಕ್ಕೆ ರಾಜಮನೆತನದ ದೇವಾಲಯವಾದ ಆಂಜನೇಯಸ್ವಾಮಿಗೆ ಪೂಜೆ ಮುಗಿದ ನಂತರ, ಮಹಿಳಾ ಮತ್ತು ಕಲ್ಯಾಣ ಇಲಾಖೆಯಿಂದ ಮಹಿಳೆಯರಿಂದ ಕಳಶಹೊತ್ತ ಪ್ರದರ್ಶನ ಹಾಗೂ ಗಣ್ಯರಿಗೆ ಸ್ವಾಗತಿಸಲಿದ್ದಾರೆ. ನಂತರ ನೃತ್ಯ ಮತ್ತು ಸ್ವಾಗತ ಗೀತೆ ಮೂಲಕ ಗಣ್ಯರ ಆಗಮನ, ಕಂಸಾಳೆ, ವೀರಗಾಸೆ, ಹೂವಿನ ಆಲಂಕಾರ ಮುಗಿದ ಬಳಿಕ ದಸರಾಕ್ಕೆ ಹೋಗುವ ಆರು ಆನೆಗಳಿಗೆ ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಸ್ವಾಗತಿಸುವರು.
ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ, ತಹಸೀಲ್ದಾರ್ ಶಿವಾನಂದಮೂರ್ತಿ ಸ್ವಾಗತಿಸಲಿದ್ದು, ಶಿಕ್ಷಣ ಇಲಾಖೆಯ ಮಹೇಶ್ ತಂಡ ನಾಡಗೀತೆ ಮತ್ತು ರೈತಗೀತೆ ಹಾಡುವರು. ಗಿರಿಜನ ಮತ್ತು ಟಿಬೆಟಿಯನ್ನರ ವಿದ್ಯಾರ್ಥಿಗಳಿಂದ ವಿಶೇಷ ಜನಪದ ನೃತ್ಯ ಏರ್ಪಡಿಸಿದೆ.
ಜಿಲ್ಲಾ ಉಸ್ತುವಾರಿ ಸಚಿವರು ವಿದ್ಯುಕ್ತವಾಗಿ ಚಾಲನೆ ನೀಡುವರು. ಶಾಸಕ ಎಚ್.ಪಿ. ಮಂಜುನಾಥ್ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ಎಲ್ಲಾ ಶಾಸಕರು ಮತ್ತು ಮೈಸೂರು, ಮಂಡ್ಯ, ಚಾಮರಾಜನಗರ, ಜಿಲ್ಲೆಯ ಸಂಸದರು, ಸ್ಥಳಿಯ ಜನಪ್ರತಿನಿಧಿಗಳು ಭಾಗವಹಿಸುವರು ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.