ಮನೆ ಬಾಗಿಲು ಮುರಿದು ಚಿನ್ನಾಭರಣ ಕಳವು
ಮೈಸೂರು: ಮನೆಯ ಬಾಗಿಲು ಮುರಿದ ಕಳ್ಳರು 3 ಲಕ್ಷ ಮೌಲ್ಯದ ಬೆಳ್ಳಿ ಮತ್ತು 70 ಗ್ರಾಂ ಚಿನ್ನ ಕದ್ದು ಪರಾರಿಯಾಗಿರುವ ಘಟನೆ ಜೆ.ಪಿ. ನಗರದಲ್ಲಿ ನಡೆದಿದ್ದು, ಪೊಲೀಸ್ ಠಾಣೆಯ ಹಿಂಭಾಗದ ಮನೆಯಲ್ಲಿಯೆ ಈ ಘಟನೆ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಜೆ.ಪಿ. ನಗರ ಬಿ ಬ್ಲಾಕ್, 7ನೇ ಕ್ರಾಸ್ ನಿವಾಸಿ ಜನಾರ್ದನ್ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಕಳೆದ ರಾತ್ರಿ ಸ್ಯಾಂಟ್ರೋ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮೊದಲು ಕೆಳಗಿನ ಮನೆಯ ಬಾಗಿಲು ಒಡೆದಿದ್ದಾರೆ. ಅಲ್ಲಿ ಏನೂ ಸಿಗದಿದ್ದಾಗ, ಮೇಲಿನ ಮನೆಯ ಬಾಗಿಲು ಮುರಿದು ಒಂದು ಎಲ್ಸಿಡಿ ಟಿವಿ, 3 ಲಕ್ಷ ಮೌಲ್ಯದ ಬೆಳ್ಳಿ ವಸ್ತು ಮತ್ತು 70 ಗ್ರಾಂ ತೂಕದ ಚಿನ್ನ ಕದ್ದು ಪರಾರಿಯಾಗಿದ್ದಾರೆ. ರಾತ್ರಿ ವೇಳೆ ಶಬ್ದ ಆಗುವುದನ್ನು ಗಮನಿಸಿದ ನೆರೆಮನೆಯವರು ಕಾರಿನಲ್ಲಿ ಬಂದಿರಬೇಕು ಎಂದು ಸುಮ್ಮನಾಗಿದ್ದಾರೆ. ಅಲ್ಲದೆ, ಕಳ್ಳತನ ನಡೆಸಿ ತೆರಳುವಾಗ ಕಾರು ಸ್ಟಾರ್ಟ್ ಆಗದೆ ತಳ್ಳಿಕೊಂಡು ಸ್ಟಾರ್ಟ್ ಮಾಡಿರುವುದನ್ನು ಸಾರ್ವಜನಿಕರು ಗಮನಿಸಿದ್ದಾರೆ. ಕರ್ತವ್ಯದ ಮೇಲೆ ಹೊರ ಹೋಗಿದ್ದ ಜನಾರ್ದನ್ ಬೆಳಗ್ಗೆ ಮನೆಗೆ ಬಂದಾಗ ಈ ವಿಷಯ ತಿಳಿದು ಬಂದಿದೆ. ಈ ಮನೆಯ ಹಿಂಭಾಗದಲ್ಲಿಯೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆ ಇದ್ದರೂ, ಕಳ್ಳತನ ಆಗಿರುವುದು ಯಾರೊಬ್ಬರ ಅರಿವಿಗೂ ಬಂದಿಲ್ಲ. ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ವಿದ್ಯಾರಣ್ಯಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

