ಮೈಸೂರು

ಭೇರ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ

Published On :

ಕ.ಪ್ರ.ವಾರ್ತೆ ಭೇರ್ಯ ಆ. 27
ರಾಜ್ಯದಲ್ಲಿ ನಡೆದ ಲೋಕಸಭೆ ಮತ್ತು ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕ ಮತ ಪಡೆದು ಜಯಭೇರಿ ಬಾರಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ಬಂದಿದೆ ಎಂದು ಕೆ.ಆರ್. ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಲ್. ರಾಜಶೇಖರ್ ಹೇಳಿದರು.
ಮೈಸೂರು- ಚಾಮರಾಜನಗರ  ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯರಾಗಿ ಧರ್ಮಸೇನ ಆಯ್ಕೆ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಿ, ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದ ನಂತರ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ಕಾರ್ಯವೈಖರಿ ಮತ್ತು ಜನಪರ ಅಭಿವೃದ್ಧಿ ಕಾರ್ಯಕ್ರಮ ನೋಡಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿ ಧರ್ಮಸೇನ ಅವರು ಕೂಡ ಅವರ ತಂದೆಯ ಹಾದಿಯಲ್ಲಿ ಬಂದವರು ಎಂದು ತಿಳಿಸಿದರು.
ವಿಜಯೋತ್ಸವ ಆಚರಣೆ ವೇಳೆಯಲ್ಲಿ ಚಿಕ್ಕಭೇರ್ಯ ಗ್ರಾಮದ ಮೊಕಬಲ್ ಷರೀಫ್ ಜೆಡಿಎಸ್ ತೊರೆದು, ಕಾಂಗ್ರೆಸ್ ಸೇರಿದರು. ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾಗತಿಸಲಾಯಿತು. ಗ್ರಾಪಂ ಮಾಜಿ ಅಧ್ಯಕ್ಷರಾದ ಬಿ.ಎಚ್. ಮಹದೇವು, ಮುಶೀರ್‌ಖಾನ್, ಮುಸ್ಲಿಂ ಮುಖಂಡ ಖಾಲಿದ್‌ಪಾಷ, ಅಲ್ತಾಫ್‌ಖಾನ್, ಅಹಿಂದ ಮುಖಂಡ ಕಾಳೇಗೌಡ, ಹುಚ್ಚೇಗೌಡ, ಮಂಜೇಗೌಡ, ಜಯರಾಮೇಗೌಡ, ದಲಿತ ಮುಖಂಡರಾದ ಗಿಡ್ಡುಕುಮಾರ್, ಶಿವಪ್ಪ, ಚಿಕ್ಕಭೇರ್ಯ ರಾಮೇಗೌಡ ಇದ್ದರು.

ದಸರಾ ಉದ್ಘಾಟನೆಗೆ ಕಂಬಾರ: ಸ್ವಾಗತ
ನಂಜನಗೂಡು:
ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಅವರನ್ನು ಆಹ್ವಾನಿಸಿರುವುದನ್ನು ತಾಲೂಕಿನ ವಿರಾಟ್ ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘ ಸ್ವಾಗತಿಸಿದೆ. ನಾಡಿನ ಸಾಂಸ್ಕೃತಿಕ ನಗರಿ, ಕಲೆ, ಸಾಹಿತ್ಯ, ಸಂಗೀತಕ್ಕೆ ಹೆಸರುವಾಸಿಯಾದ ಮೈಸೂರಿನಲ್ಲಿ ನಡೆಯುವ ಈ ನಾಡಹಬ್ಬಕ್ಕೆ ಕಂಬಾರರನ್ನು ಉದ್ಘಾಟನೆಗಾಗಿ ಆಹ್ವಾನಿಸಿರುವುದು ಸ್ವಾಗತಾರ್ಹ ಎಂದು ಜಿಲ್ಲಾ ವಿಶ್ವಕರ್ಮ ಸಮಾಜದ ಅಧ್ಯಕ್ಷ ನಂದಕುಮಾರ್ ಮತ್ತು ತಾಲೂಕು ಸಂಘದ ಗೌರವಾಧ್ಯಕ್ಷ ದೇವನೂರು ಪಿ. ನಾಗಣ್ಣಚಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.