ಮೈಸೂರು

'ಸೋಲು ಗೆಲವನ್ನು ಸಮಾನವಾಗಿ ಸ್ವೀಕರಿಸಿ'

Published On :

ಕ.ಪ್ರ.ವಾರ್ತೆ ಕೆ.ಆರ್. ನಗರ ಆ. 27
ಕ್ರೀಡೆಯಲ್ಲಿ ಸೋಲು, ಗೆಲವು ಸಹಜ. ಅವುಗಳನ್ನು ವಿದ್ಯಾರ್ಥಿಗಳು ಸಮಚಿತ್ತದಿಂದ ಸ್ವೀಕರಿಸಿ ಭಾಗವಹಿಸುವಿಕೆಯತ್ತ ಗಮನಹರಿಬೇಕು ಎಂದು ವೃತ್ತ ನಿರೀಕ್ಷಕ ಪ್ರಸನ್ನಕುಮಾರ ಹೇಳಿದರು.
ಪಟ್ಟಣದ ಕೃಷ್ಣರಾಜೇಂದ್ರ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿ, ಪೋಷಕರು ತಮ್ಮ ಮಕ್ಕಳನ್ನು ಶಿಕ್ಷಣಕ್ಕೆ ಸೀಮಿತಗೊಳಿಸದೆ ಕ್ರೀಡಾ ಚಟುವಟಿಕೆಗಳಿಗೂ ಆದ್ಯತೆ ನೀಡಬೆಕು. ಕ್ರೀಡೆಯಿಂದ ಮಾನಸಿಕ, ದ್ಯೆಹಿಕ ಬೆಳವಣಿಗೆಯ ಜತೆಗೆ ಆ ಕ್ಷೇತ್ರದಲ್ಲಿಯು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿಯು ಹೆಸರು ಮಾಡಬಹುದು. ಆದ್ದರಿಂದ ವಿದ್ಯಾರ್ಥಿಗಳು ಆ ಕ್ಷೇತ್ರದತ್ತ ಗಮನಹರಿಸಿ ಎಂದು ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಟಿ. ಜವರೇಗೌಡ ಮಾತನಾಡಿ, ಮಕ್ಕಳ ಪ್ರತಿಭೆಗೆ ಪೋಷಕರು ಆಸರೆಯಾಗಬೇಕು. ಹಾಗಾದಾಗ ಅವರು ತಮ್ಮ ಪ್ರತಿಭೆ ಹೊರಗೆಡವಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ತಾಲೂಕು ಆರೋಗ್ಯಾಧಿಕಾರಿ ಡಾ. ಶಿವಪ್ರಸಾದ್, ದೈಹಿಕ ಶಿಕ್ಷಣಾಧಿಕಾರಿ ಮಧುರದಾಸ್, ಪುರಸಭಾ ಮುಖ್ಯಾಧಿಕಾರಿ ನಾಗಶೆಟ್ಟಿ, ಬಿಆರ್‌ಪಿ ಬಿ.ಸಿ. ದೊಡ್ಡೇಗೌಡ ಇದ್ದರು.

ಮುಂಬೈ ಅತ್ಯಾಚಾರ ಪ್ರಕರಣ ಖಂಡಿಸಿ ಪ್ರತಿಭಟನೆ
ಕ.ಪ್ರ.ವಾರ್ತೆ ಎಚ್.ಡಿ.ಕೋಟೆ ಆ. 27

ಮುಂಬೈನಲ್ಲಿ ಪತ್ರಿಕಾ ಛಾಯಾಗ್ರಾಹಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ಮಂಗಳವಾರ ತಾಲೂಕು ಪತ್ರಕರ್ತರು, ತಾಲೂಕು ಛಾಯಾಗ್ರಾಹಕರ ಸಂಘದ ಸದಸ್ಯರು ಪ್ರತಿಭಟಿಸಿದರು.ಮುಂಬೈನಲ್ಲಿ ಸುದ್ದಿ ಮಾಡಲು ತೆರಳಿದ್ದ ಪತ್ರಿಕಾ ಛಾಯಾಗ್ರಾಹಕಿ ಮೇಲೆ ನಡೆಸಿರುವ ಸಾಮೂಹಿಕ ಅತ್ಯಾಚಾರ ಘಟನೆ ಇಡಿ ನಾಗರಿಕ ಸಮಾಜ ತಲೆತಗ್ಗಿಸುವ ಕೃತ್ಯವಾಗಿದೆ.
ಅತ್ಯಾಚಾರ ಪ್ರಕರಣಗಳನ್ನು ತ್ವರಿತಗತಿಯಲ್ಲಿ ತೀರ್ಮಾನಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಪ್ರತಿಭಟನಾಕಾರರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ, ತಹಸೀಲ್ದಾರ್ ಕೃಷ್ಣ ಅವರಿಗೆ ಮನವಿ ಸಲ್ಲಿಸಿದರು.ಪತ್ರಕರ್ತರ ಸಂಘದ ಅಧ್ಯಕ್ಷ ಮಂಜು ಕೋಟೆ, ಛಾಯಾಗ್ರಾಹಕರ ಸಂಘದ ಅಧ್ಯಕ್ಷ ನಂದಕುಮಾರ್ ಶೈಲಿ, ಕನ್ನಡ ಪ್ರಮೋದ್, ನಾಗಾರಾಮ್, ಎಂ.ಎಲ್. ರವಿಕುಮಾರ್, ಜಿ. ರವಿಕುಮಾರ್, ದಾಸೇಗೌಡ, ಶರವಣ, ಬಸವರಾಜು, ಅಂಕನಾಯಕ, ಸತೀಶ್ ಆರಾಧ್ಯ, ರಾಜುಸಾಗರ್, ನಿಂಗರಾಜು, ಕೆಂಡಗಣ್ಣ ಆರಾಧ್ಯ, ಶಂಕರ್, ಸುರೇಶ್, ಮನೋಜ್, ಹೊನ್ನೇಗೌಡ, ಕಾಳಾಚಾರಿ, ರವಿ ಹಾಗೂ ಛಾಯಾಗ್ರಾಹಕರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.