ಮೈಸೂರಿನಲ್ಲಿ 9ನೇ ಅಖಿಲ ಭಾರತ ಯಕ್ಷಗಾನ ಸಾಹಿತ್ಯ ಸಮ್ಮೇಳನ
ಕ.ಪ್ರ.ವಾರ್ತೆ ಮೈಸೂರು ಆ. 28
ಕರ್ನಾಟಕ ಸಾಂಸ್ಕೃತಿಕ ಕಲಾ ಪ್ರತಿಷ್ಠಾನದಿಂದ 2014ರ ಫೆಬ್ರವರಿಯಲ್ಲಿ 9ನೇ ಅಖಿಲ ಭಾರತ ಯಕ್ಷಗಾನ ಬಯಲಾಟ ಸಾಹಿತ್ಯ ಸಮ್ಮೇಳನವನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.
ಈ ಸಂಬಂಧ ನಗರದಲ್ಲಿ ಇತ್ತೀಚೆಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು. ಪ್ರತಿಷ್ಠಾನದ ಅಧ್ಯಕ್ಷ ಎಸ್.ಎನ್. ಪಂಜಾಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಗರದ ಜಗನ್ಮೋಹನ ಅರಮನೆಯಲ್ಲಿ ಸಮ್ಮೇಳನವನ್ನು ಕಲಾತ್ಮಕವಾಗಿ ನಡೆಸಲು ಸಮ್ಮತಿಸಲಾಯಿತು. ಅಲ್ಲದೆ ಮುಂದಿನ ದಿನಗಳಲ್ಲಿ ಸಮ್ಮೇಳನದ ಉಪಸಮಿತಿಗಳ ರಚನೆ, ಸಭಾಧ್ಯಕ್ಷರ ಆಯ್ಕೆ ಮುಂತಾದವುಗಳ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಲಾಯಿತು.
ಯಕ್ಷಗಾನ ಬಯಲಾಟಗಳ ಹತ್ತು ಹಲವು ಪ್ರಕಾರಗಳಾದ ತೆಂಕುತಿಟ್ಟು, ಬಡಗುತಿಟ್ಟು, ಬಡಾಬಡಗುತಿಟ್ಟು, ದೊಡ್ಡಾಟ, ಸಣ್ಣಾಟ, ಕೃಷ್ಣಪಾರಿಜಾತ, ಸಂಗ್ಯಾಬಾಳ್ಯ, ಭಾಗವತರಾಟ, ತೊಗಲುಗೊಂಬೆಯಾಟ, ಮೂಡಲಪಾಯ, ಘಟದಕೋರೆ ಪ್ರದರ್ಶನ ಏರ್ಪಡಿಸಲಾಗುತ್ತದೆ. ಪಾತ್ಯಕ್ಷಿಕೆ, ವಿಚಾರ ಸಂಕಿರಣ, ತಾಳಮದ್ದಳೆ ಸಮ್ಮೇಳನದಲ್ಲಿ ಪ್ರಮುಖ ಆಕರ್ಷಣೆಗಳಾಗಲಿವೆ. ಜತೆಗೆ ಮೌಲ್ಯಯುತ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಯಕ್ಷಗಾನ ತಜ್ಞ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್, ಕಲಾವಿದ ಗ.ನಾ. ಭಟ್ಟ, ಸಾಹಿತಿ ಜಿ.ಎಸ್. ಭಟ್ಟ, ಯಕ್ಷಕರ್ಮಿ ಜಿ.ಎನ್. ಅನಂತವರ್ದನ, ಅಂಕಣಕಾರ ಧನಂಜಯ, ಕಲಾವಿದ ಪ್ರಸಾದ್ ರಾಜೇ ಅರಸ್, ಪಾಲಿಕೆ ಮಾಜಿ ಸದಸ್ಯ ವಾಸು ವಾಮಂಜೂರು, ಕಸಾಪ ಮಾಜಿ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

