ರಾಷ್ಟ್ರೀಯ ಕ್ರೀಡಾ ದಿನ ಅಂಗವಾಗಿ ಸಾಮೂಹಿಕ ನಡಿಗೆ
ಕ.ಪ್ರ.ವಾರ್ತೆ ಮೈಸೂರು ಆ. 29
ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಗುರುವಾರ ಸಾಮೂಹಿಕ ನಡಿಗೆ ಕಾರ್ಯಕ್ರಮ ನಡೆಯಿತು.
ರಾಷ್ಟ್ರೀಯ ಕ್ರೀಡಾ ದಿನಾಚರಣೆ ಆಚರಣಾ ಸಮಿತಿಯು ನಗರ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಿಂದ ಆಯೋಜಿಸಿದ್ದ ಈ ಸಾಮೂಹಿಕ ನಡಿಗೆಗೆ ನಗರ ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ಚಾಲನೆ ನೀಡಿದರು.
ಬಳಿಕ ಜಾಥಾವು ಹಳೆ ಪ್ರತಿಮೆ ವೃತ್ತ, ಕೆ.ಆರ್. ವೃತ್ತ, ದೇವರಾಜ ಅರಸು ರಸ್ತೆ, ಜಿಲ್ಲಾಧಿಕಾರಿ ಕಚೇರಿ, ಓವೆಲ್ ಮೈದಾನದ ಮೂಲಕ ಮೈಸೂರು ವಿವಿ ಸ್ಪೋರ್ಟ್ಸ್ ಪೆವಿಲಿಯನ್ ತಲುಪಿತು.
ಡಿವೈಎಸ್‌ಎಸ್, ಹಾಕಿ ಕ್ರೀಡಾಪಟುಗಳು, ಅಥ್ಲೆಟಿಕ್ ಅಸೋಸಿಯೇಷನ್, ದೈಹಿಕ ಶಿಕ್ಷಕರ ಸಂಘ, ಗುಡ್ ಶಫರ್ಡ್ ಶಾಲೆ ವಿದ್ಯಾರ್ಥಿಗಳು, ಕ್ರೀಡಾ ಹಾಸ್ಟೆಲ್ ವಿದ್ಯಾರ್ಥಿನಿಯರು ಜಾಥಾದಲ್ಲಿ ಭಾಗವಹಿಸಿದ್ದರು.
ಈ ಜಾಥಾದ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ಮಾತನಾಡಿ, ಈ ಬಾರಿಯ ದಸರಾ ಸಂದರ್ಭದಲ್ಲಿ ಮೂರು ರಾಷ್ಟ್ರೀಯ ಕ್ರೀಡಾಕೂಟ ಆಯೋಜಿಸಲಾಗುವುದು. ರಾಜ್ಯ ಸರ್ಕಾರವು ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಹಾಕಿ ಟರ್ಫ್ ಅಳವಡಿಸಲು ಸಹಕರಿಸಿದೆ. ಉತ್ತಮವಾದ ಹಾಕಿ ಮೈದಾನದ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಹೇಳಿದರು.
ಐಎಎಸ್ ಅಧಿಕಾರಿ ಅನ್ನೀಸ್, ಕ್ರೀಡಾ ದಿನ ಆಚರಣಾ ಸಮಿತಿಯ ಕೆ. ಕೃಷ್ಣೆಗೌಡ, ಡಾ. ಪುಲಿಕೇಶಿ ಶೆಟ್ಟಪ್ಪನವರ್, ಡಾ.ಬಿ.ಜಿ. ಸಾಗರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

