ಶಿಷ್ಯರು ಮೆಚ್ಚಿದ ಗುರು ಪ್ರಶಸ್ತಿಗೆ ಅರ್ಜಿ
ಮೈಸೂರು: ನಗರದ ನೇಗಿಲಯೋಗಿ ಸಮಾಜಸೇವಾ ಟ್ರಸ್ಟ್ ಶಿಷ್ಯರು ಮಚ್ಚಿದ ಗುರು ಪ್ರಶಸ್ತಿಗೆ ಮೈಸೂರು ನಗರ ಮತ್ತು ತಾಲೂಕು ವ್ಯಾಪ್ತಿಯ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಪ್ರತಿ ವರ್ಷ ಉತ್ತಮ ಶಿಕ್ಷಕ ಪ್ರಶಸ್ತಿ ನೀಡುತ್ತಿದೆ. ಆದರೆ ಪದವಿ ಪೂರ್ವ, ಪದವಿ, ತಾಂತ್ರಿಕ ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ಬೋಧನೆ ಮಾಡುತ್ತಿರುವವರಿಗೆ ಯಾವುದೇ ಪ್ರಶಸ್ತಿ ನೀಡುತ್ತಿಲ್ಲ. ಆದ್ದರಿಂದ ನಮ್ಮ ಟ್ರಸ್ಟ್ ವತಿಯಿಂದ ಈ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಟ್ರಸ್ಟ್ನ ಅಧ್ಯಕ್ಷ ಡಾ.ಎಲ್. ದೇವೇಗೌಡ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಹೆಚ್ಚಿನ ಮಾಹಿತಿಗೆ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆ, ಶೇಷಾದ್ರಿ ಅಯ್ಯರ್ ರಸ್ತೆ, ಹಳೆ ಆರ್ಎಂಸಿ ಹತ್ತಿರ, ಮೈಸೂರು. ಇಲ್ಲಿಗೆ ಖುದ್ದಾಗಿ ಅಥವಾ ಮೊ. 8277520042 ಸಂಪರ್ಕಿಸಬಹುದು ಎಂದರು. ಸಂಸ್ಥೆಯ ಕಾರ್ಯದರ್ಶಿ ಪಿ.ವಿಶ್ವನಾಥ್, ಶ್ರೀನಿವಾಸ್, ಚರಣ್ರಾಜ್ ಮತ್ತು ಹೇಮಲತಾ ಇದ್ದರು.
ಇಂದಿನಿಂದ ಕಲಾಪಕ್ಕೆ ವಕೀಲರ ಹಾಜರು
ಮೈಸೂರು: ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಪ್ರಭಾರ ಶಿರಸ್ತೇದಾರ್ ಎ.ಎಂ. ನಾಗೇಂದ್ರ ಪ್ರಸಾದ್ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಜರುಗಿಸುವುದಾಗಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಘೇಲಾ ಭರವಸೆ ನೀಡಿದ್ದಾರೆ. ಮೈಸೂರು ವಕೀಲರ ಸಂಘದ ಅಧ್ಯಕ್ಷ ಸಿ.ಬಸವರಾಜು ಅವರ ನೇತೃತ್ವದಲ್ಲಿ ಅವರನ್ನು ಭೇಟಿ ಮಾಡಿದ್ದ 70 ಮಂದಿ ವಕೀಲರ ತಂಡದ ಮನವಿ ಪುರಸ್ಕರಿಸಿ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ನಾಗೇಂದ್ರ ಪ್ರಸಾದ್ ವಿರುದ್ಧ ತನಿಖೆ ನಡೆಸಿ 10 ದಿನದಲ್ಲಿ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ವಕೀಲರು ಶುಕ್ರವಾರದಿಂದ ಕಲಾಪಕ್ಕೆ ಹಾಜರಾಗಲು ನಿರ್ಧರಿಸಿದ್ದಾರೆ. 15 ದಿನದಲ್ಲಿ ನಾಗೇಂದ್ರ ಪ್ರಸಾದ್ ವಿರುದ್ಧ ತನಿಖೆ ನಡೆಸಿ ವರದಿ ನೀಡಿದ ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ವಕೀಲರ ಹೋರಾಟ ಸಫಲವಾಗಿದೆ.
ಬೈಕ್ ಸವಾರ ಸಾವು
ಮೈಸೂರು: ಬೈಕ್ ನಿಯಂತ್ರಣ ತಪ್ಪಿದ್ದರಿಂದ ಸವಾರನೊಬ್ಬ ಬಿದ್ದು ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಹೆಬ್ಬಾಳು ಕೈಗಾರಿಕ ಪ್ರದೇಶದಲ್ಲಿ ನಡೆದಿದೆ. ಹೆಬ್ಬಾಳು ಬಡಾವಣೆ ನಿವಾಸಿ ಪೆರುಮ್ಮಾಳ್ ಎಂಬವರ ಪುತ್ರ ರಮೇಶ್ (28) ಮೃತಪಟ್ಟವರು. ವಿಕ್ರಾಂತ್ ರೇಲ್ವೆ ಬಡಾವಣೆಯಲ್ಲಿ ಹಾಲಿನ ಕೇಂದ್ರ ನಡೆಸುವ ರಮೇಶ್, ಬುಧವಾರ ರಾತ್ರಿ ಎಂದಿನಂತೆ ಮನೆಯಲ್ಲಿ ಊಟ ಮುಗಿಸಿ ಹಾಲಿನ ಕೇಂದ್ರಕ್ಕೆ ಬೈಕ್ನಲ್ಲಿ ತೆರಳುತ್ತಿದ್ದಾಗ ಹೆಬ್ಬಾಳು ಕೈಗಾರಿಕಾ ಪ್ರದೇಶದ ಸುನಂದ ಕಾರ್ಖಾನೆ ಬಳಿ ನಿಯಂತ್ರಣ ತಪ್ಪಿ ಬಿದ್ದಿದ್ದಾರೆ. ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ ಮಾಡಿದ್ದರ ಪರಿಣಾಮ ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಗುರುವಾರ ಬೆಳಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ವಿವಿ ಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

