ಮೈಸೂರು

ಕಾವಾ ಅಭಿವೃದ್ಧಿಗೆ ಸರ್ಕಾರ ಬದ್ಧ

Published On :

ಕ.ಪ್ರ.ವಾರ್ತೆ ಮೈಸೂರು ಆ. 31
ಕಲೆಗಳ ತವರೂರಾಗಿರುವ ಮೈಸೂರಿನಲ್ಲಿ ಕಾವಾ ಸಂಸ್ಥೆಗೆ ತನ್ನದೇ ಆದ ವಿಶಿಷ್ಟತೆ ಇದೆ. ಈ ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಶಾಸಕ ಎಂ.ಕೆ. ಸೋಮಶೇಖರ್ ಹೇಳಿದರು.
ನಗರದ ಸಯ್ಯಾಜಿರಾವ್ ರಸ್ತೆಯಲ್ಲಿರುವ ಕಾವಾದಲ್ಲಿ ಶನಿವಾರ 6ನೇ ರಾಷ್ಟ್ರ ಮಟ್ಟದ ದೃಶ್ಯಕಲಾ ಕಾಲೇಜಿನ ವಿದ್ಯಾರ್ಥಿಗಳ ಕಾರ್ಯಾಗಾರದ ಸಮಾರೋಪದಲ್ಲಿ ಮಾತನಾಡಿದ ಅವರು, ಕಾವಾದ ನೂತನ ಕಟ್ಟಡ ನಿರ್ಮಾಣಕ್ಕೆ 15 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿ 5 ಕೋಟಿ ಬಿಡುಗಡೆ ಮಾಡಿದೆ. ಇನ್ನುಳಿದ 10 ಕೋಟಿಯನ್ನು ಸದ್ಯದಲ್ಲಿ ಬಿಡುಗಡೆ ಮಾಡಿಸಲು ಯತ್ನಿಸುವುದಾಗಿ ತಿಳಿಸಿದರು. ರಾಜರ ಕಾಲದಿಂದಲೂ ಮೈಸೂರಿನ ಅರಸರು ಕಲೆ, ಸಂಸ್ಕೃತಿಯನ್ನು ಪೋಷಿಸಿಕೊಂಡು ಬಂದಿದ್ದಾರೆ. ಅದರ ಪರಂಪರೆಯನ್ನು ಸರ್ಕಾರ ಮುಂದುವರಿಸಿದೆ. ಕಲೆ ಎಂಬುದು ಜೀವನದ ಅದ್ಭುತ ಅನುಭವ. ದೇಶದ ವಿವಿಧೆಡೆ ಇರುವ ದೃಶ್ಯಕಲಾ ವಿದ್ಯಾರ್ಥಿಗಳು ಮತ್ತಷ್ಟು ಕಲಿತುಕೊಳ್ಳಲು ಈ ಕಾರ್ಯಾಗಾರಕ್ಕೆ ಭಾಗವಹಿಸಿದ್ದಾರೆ. ಕಲಾವಿದರು ಜೀವನದಲ್ಲಿ ಸಾಕಷ್ಟು ಶ್ರಮವಹಿಸಿದರೆ ಉನ್ನತ ಮಟ್ಟಕ್ಕೆ ಬೆಳೆಯಬಹುದು. ಸರ್ಕಾರ ನೀಡುವ ಸೌಲಭ್ಯ ಬಳಸಿಕೊಂಡು ಉಜ್ವಲ ಭವಿಷ್ಯ ಕಂಡುಕೊಳ್ಳುವಂತೆ ಅವರು ಸಲಹೆ ನೀಡಿದರು.
ಕಾವಾ ಡೀನ್ ವಿ.ಎ. ದೇಶಪಾಂಡೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾದ ಪ್ರೊ.ರಾಮದಾಸ್ ಆಡ್ಯಂತಾಯ, ನಾರಾಯಣ ಸೂತ್ರದಾರ, ಶ್ರೀಧರ ಕಾಕಡೆ, ಕಿರಣ್ ಆದಿತ್ಯ ಇದ್ದರು.
ಕಾರ್ಯಾಗಾರ ಯಶಸ್ವಿ: ಕಾವಾದಲ್ಲಿ ಕಳೆದ ಒಂದು ವಾರದಿಂದ ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟದ ಕಾರ್ಯಾಗಾರವು ಯಶಸ್ವಿಯಾಗಿದೆ. ಬರೋಡ, ಮುಂಬೈ, ಶಾಂತಿನಿಕೇತನ, ದೆಹಲಿ, ಗುಲ್ಬರ್ಗ, ಬೆಂಗಳೂರು ಕಡೆಯಿಂದ ಆಗಮಿಸಿದ್ದ ದೃಶ್ಯಕಲಾ ವಿದ್ಯಾರ್ಥಿಗಳು, ಕಾವಾ ವಿದ್ಯಾರ್ಥಿಗಳ ಜತೆಗೂಡಿ ಕಾರ್ಯಾಗಾರಕ್ಕೆ ಚೈತನ್ಯ ತುಂಬಿದರು. ಶಿಲ್ಪಕಲಾ, ಚಿತ್ರಕಲೆ, ಗ್ರಾಫಿಕ್ಸ್, ಫೋಟೋ ಜರ್ನಲಿಸಂ ವಿಭಾಗಗಳಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ ಎಂದು ಡೀನ್ ವಿ.ಎ. ದೇಶಪಾಂಡೆ ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.