ಇಂದಿನಿಂದ ರಾಜ್ಯ ಮಟ್ಟದ ಕ್ರೀಡಾಕೂಟ
ಕ.ಪ್ರ.ವಾರ್ತೆ ಕೆ.ಆರ್. ನಗರ ಆ. 31
ವಿದ್ಯಾಭಾರತಿ ಕರ್ನಾಟಕ ವೇದಿಕೆಯ ವತಿಯಿಂದ ಸೆ.1 ರಿಂದ 3ರವರೆಗೆ ಇಲ್ಲಿನ ಕೃಷ್ಣರಾಜೇಂದ್ರ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ 19ನೇ ಪ್ರಾಂತೀಯ ಕ್ರೀಡಾಕೂಟ ಮತ್ತು ಮೇಲಾಟಗಳು ನಡೆಯಲಿವೆ ಎಂದು ವಾಸವಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ದೇವಪಾಲ್ ಹೇಳಿದರು.
ಸೆ.1 ರಂದು ಮಧ್ಯಾಹ್ನ 3ಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ತೋಂಟದಾರ್ಯ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸಾ.ರಾ. ಮಹೇಶ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕ್ರಿಕೆಟ್ ತರಬೇತುದಾರ ಕೆ.ಎಂ. ವಿಶ್ವನಾಥ್, ವಾಸವಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ರಾಮಾನುಜಶೆಟ್ಟಿ, ಜಿ.ಆರ್. ಜಗದೀಶ್, ವೈಜನಾಥ್ ರೊಟ್ಟೆ ಭಾಗವಹಿಸುವರು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮೂರು ದಿನಗಳು ವಿವಿಧ ವಯೋವಾನದವರಿಗೆ ಮೂರು ವರ್ಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಸೆ.3 ರಂದು ಸಮಾರೋಪ ಸಮಾರಂಭ ನಡೆಯಲಿದೆ ಎಂದು ಮಾಹಿತಿ ನೀಡಿದರು. ಕ್ರೀಡಾಕೂಟಕ್ಕೆ ನಗರದ ಪ್ರಮುಖರು ಮತ್ತು ಹಿರಿಯರು ಅಗತ್ಯ ಸಲಹೆ ಸಹಕಾರ ನೀಡಿದ್ದು, ಅವರಿಗೆ ಸಂಸ್ಥೆ ಕೃತಜ್ಞತೆ ಸಲ್ಲಿಸಿದೆ ಎಂದರು.
ಸಮಾರೋಪದಲ್ಲಿ ಕ್ರಿಕೆಟ್ ತರಬೇತುದಾರ ಕೆ.ಎಂ. ವಿಶ್ವನಾಥ್ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಸದಸ್ಯ ಸಮಾರೋಪ ಭಾಷಣ ಮಾಡುವರು. ಮುಖ್ಯ ಅತಿಥಿಗಳಾಗಿ ಯುವಜನ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಸುರೇಶ್, ಬಿಇಒ ಎಸ್.ಟಿ. ಜವರೇಗೌಡ, ವಿದ್ಯಾ ಭಾರತಿ ಕರ್ನಾಟಕ ಪ್ರಾಂತ ಕಾರ್ಯದರ್ಶಿ ಭೀಮರೆಡ್ಡಿ, ದಕ್ಷಿಣ ಮಧ್ಯ ಕ್ಷೇತ್ರ ಸಹ-ಸಂಘಟನಾ ಕಾರ್ಯದರ್ಶಿ ಜಿ.ಆರ್. ಜಗದೀಶ್, ವೈಜನಾಥ್ ರೊಟ್ಟೆ ಮತ್ತು ಮೂಳೆತಜ್ಞ ಡಾ.ಮೆಹಬೂಬ್ಖಾನ್ ಭಾಗವಹಿಸುವರು ಎಂದು ಮಾಹಿತಿ ನೀಡಿದರು. ಸಂಸ್ಥೆಯ ಡಾ. ಅಮರನಾಥ್, ಅನಂತ್, ರಘುರಾಮ್ ಇದ್ದರು.
ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟಗಳು
ಕೆ.ಆರ್. ನಗರ: ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ ಸಂಯುಕ್ತಾಶ್ರಯದಲ್ಲಿ 2013-14ನೇ ಸಾಲಿನ ಕೆ.ಆರ್.ನಗರ ತಾಲೂಕುಗಳಲ್ಲಿ ತಾಲೂಕು ಮಟ್ಟದ ಪೈಕಾ ಗ್ರಾಮೀಣ ಕ್ರೀಡಾಕೂಟ, ದಸರಾ ಕ್ರೀಡಾಕೂಟ ಮತ್ತು ಪೈಕಾ ಮಹಿಳಾ ಕ್ರೀಡಾಕೂಟ ಆಯೋಜಿಸಿದೆ. ಕ್ರೀಡಾಪಟುಗಳು ಕ್ರೀಡಾಕೂಟ ನಡೆಯುವ ಈ ಕೆಳಕಂಡ ಸ್ಥಳದಲ್ಲಿ ಕ್ರೀಡಾ ಸಂಘಟಕರಲ್ಲಿ ವರದಿ ಮಾಡಿಕೊಳ್ಳುವುದು. ದಸರಾ ಕ್ರೀಡಾಕೂಟ ಮತ್ತು ಪೈಕಾ ಮಹಿಳಾ ಕ್ರೀಡಾಕೂಟ ಸೆ.6ರ ಬೆಳಗ್ಗೆ 9ಕ್ಕೆ ತಾಲೂಕು ಕ್ರೀಡಾಂಗಣದಲ್ಲಿ ಅಥ್ಲೆಟಿಕ್ ತರಬೇತಿದಾರರಾದ ದಾಮೋದರಗೌಡ, ಮೊ. 9740506353 ಹಾಗೂ ಪೈಕಾ ಗ್ರಾಮೀಣ ಕ್ರೀಡಾಕೂಟ 2013ರರ ಸೆ.7ರಂದು ಬೆಳಗ್ಗೆ 9ಕ್ಕೆ ಕೆ.ಆರ್. ನಗರ ತಾಲೂಕು ಕ್ರೀಡಾಂಗಣದಲ್ಲಿ ಮಧುರದಾಸ್ ಮೊ.. 9985448966. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಾಮುಂಡಿ ವಿಹಾರ ಕ್ರೀಡಾಂಗಣ, ನಜರ್ಬಾದ್, ಮೈಸೂರು, ದೂ. 2564179 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

