ಮೈಸೂರು

ಸ್ಥಳೀಯ ಸಂಸ್ಥೆ ಬಲವರ್ಧನೆಗೆ ಅನುದಾನ

Published On :

ಕ.ಪ್ರ.ವಾರ್ತೆ ಟಿ. ನರಸೀಪುರ ಆ. 31
ಗ್ರಾಮೀಣ ಪ್ರದೇಶ ಹಾಗೂ ನಗರ ಪ್ರದೇಶಗಳಿಗೆ ಹೆಚ್ಚಿನ ಮೂಲ ಸೌಕರ್ಯವನ್ನು ಕಲ್ಪಿಸಿಕೊಡಲು ಸ್ಥಳೀಯ ಸಂಸ್ಥೆಗಳನ್ನು ಬಲವರ್ಧನೆಗೊಳಿಸಲು ಹೆಚ್ಚಿನ ಅನುದಾನ ಕಲ್ಪಿಸಲಾಗುವುದು ಎಂದು ವಿಧಾನ ಪರಿಷತ್‌ನ ನೂತನ ಸದಸ್ಯ ಆರ್. ಧರ್ಮಸೇನ ಹೇಳಿದರು.
ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ನಂತರ ಇಲ್ಲಿನ ಗೋಪಾಲಪುರದಲ್ಲಿರುವ ತಮ್ಮ ನಿವಾಸದಲ್ಲಿ ವಿವಿಧ ಗಣ್ಯರಿಂದ ಸನ್ಮಾನ ಸ್ವೀಕರಿಸಿ, ನೆರೆದಿದ್ದ ಕಾರ್ಯಕರ್ತರು, ಮುಖಂಡರು ಹಾಗೂ ಜನಸ್ತೋಮ ಉದ್ದೇಶಿಸಿ ಮಾತನಾಡಿದ ಅವರು, ತಾವು ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಯಾಗಿ ಮೇಲ್ಮನೆಗೆ ಆಯ್ಕೆಯಾಗಿರುವುದರಿಂದ ಅವುಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಮೂಗೂರು ಜಿಪಂ ಕ್ಷೇತ್ರದ ಸದಸ್ಯೆ ಎಂ.ಸುಧಾ ಮಹದೇವಯ್ಯ, ತಾ.ಅಂಬೇಡ್ಕರ್ ಅಭಿವೃದ್ಧಿ ಸಂಘದ ಅಧ್ಯಕ್ಷ ಮಹದೇವಯ್ಯ, ಜಿಪಂ ಮಾಜಿ ಅಧ್ಯಕ್ಷ ಎಸ್.ಎನ್. ಸಿದ್ದಾರ್ಥ, ಬಿಜೆಪಿ ಮಾಜಿ ಕ್ಷೇತ್ರಾಧ್ಯಕ್ಷ ಕೆ.ಆರ್. ಪೇಟೆ ತಾಪಂ ಮಾಜಿ ಅಧ್ಯಕ್ಷ ಎಂ. ಗೋಪಾಲ್ ಸೇರಿದಂತೆ ಇದೇ ಸಂದರ್ಭದಲ್ಲಿ ಅನೇಕ ಗಣ್ಯರು ಅಭಿನಂದಿಸಿದರು.

ನಾಲೆಯ ಹೂಳು ಎತ್ತಿಸಿದ ರೈತರು
ಹ್ಯಾಂಡ್ ಪೋಸ್ಟ್:
ಎಚ್.ಡಿ. ಕೋಟೆ ತಾಲೂಕಿನ ತಾರಕ ಬಲದಂಡೆನಾಲೆಯ 19ನೇ ತೂಬಿನಲ್ಲಿ ಸರ್ಕಾರ ಇದುವರೆಗೂ ಹೂಳು ಎತ್ತಿಸಿರಲಿಲ್ಲ. ಆದರೆ, ಸರ್ಕಾರ ನಿರ್ಲಕ್ಷ್ಯಕ್ಕೆ ಬೇಸತ್ತ ರೈತರೆ ಸ್ವಂತ ಹಣದಿಂದ ಹೂಳು ಎತ್ತಿಸಿದ ಘಟನೆ ಯರಹಳ್ಳಿಯಲ್ಲಿ ಜರುಗಿದೆ. ಕಳೆದ 10 ದಿನಗಳಿಂದ ತಾರಕ ಕಟ್ಟೆಯಿಂದ ರೈತರ ಭೂಮಿಗೆ ನೀರು ಹರಿಸುತ್ತಿದ್ದು, ನಾಲೆಗಳ ಮುಖಾಂತರ ಸರಿಯಾಗಿ ಜಮೀನುಗಳಿಗೆ ಹರಿಯದೆ ರೈತರು ತುಂಬ ಕಷ್ಟಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ರೈತರು ಸಂಬಂಧಪಟ್ಟ ತಾರಕ ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿ, ನಮ್ಮ ಜಮೀನುಗಳಿಗೆ ನೀರು ಬರುತ್ತಿಲ್ಲ, ಬೆಳೆ ಬೆಳೆಯಲು ತೀವ್ರ ಅನಾನುಕೂಲವಾಗಿದ್ದು, ಕೂಡಲೆ ನಾಲೆಗಳಿಗೆ ಸುಗಮವಾಗಿ ನೀರು ಹರಿಯಲು ಹೂಳು ತೆಗೆಸುವಂತೆ ಮನವಿ ಮಾಡಿದ್ದರು. ಸರ್ಕಾರದಿಂದ ಹೂಳು ತೆಗೆಯಲು ಅನುದಾನ ಬಿಡುಗಡೆಯಾಗಿಲ್ಲ ಎಂದು ಅಧಿಕಾರಿಗಳು ಸಬೂಬು ಹೇಳಿದ್ದರಿಂದ ಬೇಸತ್ತ ರೈತರು, ಸ್ವಂತ ಹಣದಿಂದ ಜೆಸಿಬಿ ಮುಖಾಂತರ ನಾಲೆಯಲ್ಲಿ ಹೂಳು ತೆಗೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.