ಮೈಸೂರು

ಬಿಜೆಪಿ ಜನಜಾಗರಣ ಅಭಿಯಾನಕ್ಕೆ ಚಾಲನೆ

Published On :

ಟಿ. ನರಸೀಪುರ: ಬಿಜೆಪಿ ಸರ್ಕಾರವು ಸಾಮಾನ್ಯ ಜನರ ಕಷ್ಟ ಪರಿಹರಿಸಲು ನೂರಾರು ಸೌಲಭ್ಯಗಳನ್ನು ನಾಡಿನ ಜನತೆಗೆ ತಲುಪಿಸಿದೆ ಎಂದು ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ, ವಕೀಲ ಎಂ. ನಂಜುಂಡಸ್ವಾಮಿ ಹೇಳಿದರು.
ಇಲ್ಲಿನ ತ್ರಿವೇಣಿ ನಗರದಲ್ಲಿ ಶುಕ್ರವಾರ ಮನೆ ಮನೆಗೆ ತೆರಳಿ ರಾಜ್ಯ ಬಿಜೆಪಿ ಸರ್ಕಾರ ಐದು ವರ್ಷಗಳ ಸಾಧನೆಯನ್ನು ತಿಳಿಸುವ ಬಿಜೆಪಿ ಜನಜಾಗರಣ ಅಭಿಯಾನ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದ ಮೊದಲ ಮುಖ್ಯಮಂತ್ರಿಗಳು ವೃದ್ಧಾಪ್ಯದಲ್ಲಿದ್ದವರಿಗೆ ಸಂಧ್ಯಾಸುರಕ್ಷಾ ಯೋಜನೆಯನ್ನು ಜಾರಿಗೊಳಿಸಿದ್ದು, ಸೇರಿದಂತೆ 108 ತುರ್ತು ವಾಹನದ ವೈದ್ಯಕೀಯ ಸೇವೆಗಳು ಇಂದಿಗೂ ಜನರಿಗೆ ನಿರಂತರವಾಗಿ ಉಪಯೋಗವಾಗುತ್ತಿದೆ ಎಂದು ತಿಳಿಸಿದರು. ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪಟ್ಟಣದ ಭೈರಾಪುರ ಶಕ್ತಿ ಕೇಂದ್ರದಿಂದ ಮನೆ ಮನೆಗಳಿಗೆ ತೆರಳಿ ಬಿಜೆಪಿ ಜನಜಾಗರಣ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಬಿಜೆಪಿ ಸರ್ಕಾರದ ಅಧಿಕಾರವಧಿಯಲ್ಲಿನ ಅಭಿವೃದ್ಧಿ ಕಾರ್ಯಕ್ರಮಗಳನ್ನು ತಿಳಿಸಲು ಈ ಕಾರ್ಯಕ್ರಮ ರಾಜ್ಯ ನಾಯಕರ ಸೂಚನೆಯಂತೆ ಹಮ್ಮಿಕೊಳ್ಳಲಾಗಿತ್ತು.
ಎಪಿಎಂಸಿ ನಿರ್ದೇಶಕ ನಾಗರಾಜು, ಮಾಜಿ ಅಧ್ಯಕ್ಷ ಎನ್. ಮಹೇಶ್, ತಾ. ಅಂಬೇಡ್ಕರ್ ಅಭಿವೃದ್ಧಿ ಸಂಘದ ಅಧ್ಯಕ್ಷ ಮಹದೇವಯ್ಯ, ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಿವಬಸಪ್ಪ, ಮುಖಂಡರಾದ ವಿಜಯಕುಮಾರ್, ಮಲ್ಲಿಕಾರ್ಜುನಸ್ವಾಮಿ, ಮಹದೇವಸ್ವಾಮಿ, ಭಾಗ್ಯಮ್ಮ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.