ಇಂದಿನ ಜಿಪಂ ಸಭೆ ಮುಂದಕ್ಕೆ
ಮೈಸೂರು: ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಚರ್ಚಿಸಲು ಫೆ.4 ರಂದು ನಡೆಯಬೇಕಿದ್ದ ಮೈಸೂರು ಜಿಲ್ಲಾ ಪಂಚಾಯಿತಿ ವಿಶೇಷ ಸಭೆಯನ್ನು ಫೆ.11ಕ್ಕೆ ಮುಂದೂಡಲಾಗಿದೆ.
ಕೌಶಲ್ಯ ತರಬೇತಿ
ಮೈಸೂರು ವಿವಿ ಸಾಮರ್ಥ್ಯಾಭಿವೃದ್ಧಿ ಮತ್ತು ಉದ್ಯೋಗಾವಕಾಶಗಳ ಸೇವಾ ಕೇಂದ್ರವು ನಿರೂಪಣಾ ಕೌಶಲ್ಯ ತರಬೇತಿ ಕಾರ್ಯಾಗಾರವನ್ನು ಫೆ.5ರ ಸಂಜೆ 4.30ಕ್ಕೆ ಗಂಗೋತ್ರಿಯ ಸಿಪಿಡಿಪಿಎಸ್ ಸಭಾಂಗಣದಲ್ಲಿ ಏರ್ಪಡಿಸಿದೆ. ಹಿರಿಯ ಕಾರ್ಯಕ್ರಮ ನಿರ್ವಾಹಕ ಜಿ.ಕೆ. ರವೀಂದ್ರಕುಮಾರ್ ಕಾರ್ಯಾಗಾರ ಉದ್ಘಾಟಿಸುವರು. ನಿರೂಪಕಿ ಪಿ.ಎನ್. ದೀಪಿಕಾ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಸಂಸ್ಥೆ ನಿರ್ದೇಶಕ ಪ್ರೊ.ಎ.ಎಸ್. ದಾಸನ್ ಮತ್ತು ಕಾರ್ಯಕ್ರಮ ಸಂಯೋಜಕ ಪ್ರೊ.ನಿರಂಜನ ವಾನಳ್ಳಿ ತಿಳಿಸಿದ್ದಾರೆ.
ಎಂ.ಎ ತರಬೇತಿ
ಜ್ಞಾನಬುತ್ತಿ ಶಿಕ್ಷಣ ಸಂಸ್ಥೆಯು ಮುಕ್ತ ವಿವಿಯೊಡನೆ ಕನ್ನಡ ಎಂ.ಎ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುತ್ತಿದೆ. ಫೆ.5ರ ಸಂಜೆ 6 ರಿಂದ 8 ಗಂಟೆಯೊಳಗಾಗಿ ನಗರದ ನಾರಾಯಣ ಶಾಸ್ತ್ರಿ ರಸ್ತೆಯ ಎನ್ಟಿಎಂಎಸ್ ಶಾಲೆಯಲ್ಲಿ ಶಿಬಿರ ಸಂಯೋಜಕ ಡಾ. ಪಳನಿಸ್ವಾಮಿ ಮೂಡಗೂರು ಮತ್ತು ಬಲ್ಲೇನಹಳ್ಳಿ ಶಂಕರ್ ಅವರಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಸಂಸ್ಥೆಯ ಕನ್ನಡ ಎಂಎ ತರಬೇತಿ ವಿಭಾಗದ ಅಧ್ಯಕ್ಷ ಪ್ರೊ.ಎಂ.ಕೃಷ್ಣೇಗೌಡ ತಿಳಿಸಿದ್ದಾರೆ.
ಚುಚ್ಚುಮದ್ದು ಶಿಬಿರ
ಭಾರತೀಯ ವೈದ್ಯಕೀಯ ಸಂಘವು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ರೋಗ ನಿರೋಧಕ ಚುಚ್ಚುಮದ್ದು ದಿನಾಚರಣೆ ಅಂಗವಾಗಿ 3ನೇ ಹಂತದ ಹೆಪಟೈಟಿಸ್ ಬಿ ಚುಚ್ಚುಮದ್ದು ಉಚಿತ ಶಿಬಿರವನ್ನು ಫೆ.5ರ ಬೆಳಗ್ಗೆ 9.30 ರಿಂದ ಮಧ್ಯಾಹ್ನ 1ರವರೆಗೆ ಏರ್ಪಡಿಸಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ ದೂ.0821-2421628 ಸಂಪರ್ಕಿಸಬಹುದು ಎಂದು ಸಂಸ್ಥೆ ಅಧ್ಯಕ್ಷ ಡಾ. ಸಿ. ಶರತ್ಕುಮಾರ್ ತಿಳಿಸಿದ್ದಾರೆ.
ಪರೀಕ್ಷೆಯಲ್ಲಿ ತೃತೀಯ ಸ್ಥಾನ
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಲಿ ನಡೆಸಿದ ವಿಶೇಷ ಸಂಗೀತ, ನೃತ್ಯ, ತಾಳವಾದ್ಯ ಪರೀಕ್ಷೆಯಲ್ಲಿ ನಗರದ ನೃತ್ಯ ವಿದ್ಯಾಪೀಠದ ವಿದ್ಯಾರ್ಥಿನಿ ಎಸ್. ರಶ್ಮಿ ತೃತೀಯ ಸ್ಥಾನ ಪಡೆದಿದ್ದಾರೆ. ರಶ್ಮಿ ಅವರು ವಿದುಷಿ ಸಿ.ಎನ್. ಅನಿತ ಯತಿರಾಜ್ ಮಾರ್ಗದರ್ಶನದಲ್ಲಿ ಸೀನಿಯರ್ ಹಂತದ ಭರತನಾಟ್ಯ ಪರೀಕ್ಷೆಯಲ್ಲಿ ಶೇ. 83.66 ಅಂಕ ಪಡೆದಿದ್ದಾರೆ. ಜಯನಗರದ ಮಂಜುಳಾ ಮತ್ತು ಬಿ.ಎಸ್. ಶ್ರೀಧರ್ ಅವರ ಪುತ್ರಿಯಾದ ರಶ್ಮಿ ಅವರು ಮಹಾರಾಣಿ ಮಹಿಳಾ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂ.ಎ ವ್ಯಾಸಂಗ ಮಾಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

