ಮೈಸೂರು

ರಾಜಕೀಯದಲ್ಲಿ ಜಾತಿ ಅನಿವಾರ್ಯ: ರಾಮದಾಸ್

Published On :

ಮೈಸೂರು: ಸಮಾಜದಲ್ಲಿ ಜಾತಿ ವ್ಯವಸ್ಥೆಯು ಕೆಟ್ಟ ರಾಜಕೀಯ ಪರಿಸ್ಥಿತಿಯಿಂದ ಅನಿವಾರ್ಯ ಆಗಿರುವುದು ಬೇಸರ ಮೂಡಿಸಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರಾಮದಾಸ್ ವಿಷಾದ ವ್ಯಕ್ತಪಡಿಸಿದರು.
ಜಗದ್ಗುರು ಪಂಚಾಚಾರ್ಯ ಕ್ಷೇಮಾಭಿವೃದ್ಧಿ ಸಂಘವು ಜೆಎಲ್‌ಬಿ ರಸ್ತೆಯಲ್ಲಿರುವ ಆರಾಧ್ಯ ಮಹಾಸಭಾದಲ್ಲಿ ಭಾನುವಾರ ಆಯೋಜಿಸಿದ್ದ ಪಂಚಾಚಾರ್ಯರ ಯುಗಮಾನೋತ್ಸವದಲ್ಲಿ ಅವರು ಮಾತನಾಡಿದರು.
ಈಗಿನ ಸಮಾಜವು ಜಾತಿ ಆಧಾರದ ಮೇಲೆ ನಿಂತಿದೆ. ಯಾವುದೇ ಸೌಲಭ್ಯ, ಪ್ರಾತಿನಿಧ್ಯ, ಚುನಾವಣೆಗಳಲ್ಲಿ ಸ್ಪರ್ಧಿಸಲು ಟಿಕೆಟ್ ಪಡೆಯುವುದರಿಂದ ವಿಧಾನಸೌಧದಲ್ಲಿ ಪ್ರಾಬಲ್ಯ ಮೆರೆಯುವವರೆಗೂ ಜಾತಿ ಮುಖ್ಯ ಆಗುತ್ತಿದೆ. ಜಾತಿ ವ್ಯವಸ್ಥೆಯನ್ನು ಸಮಾಜದಲ್ಲಿ ತರದಿರಲು ಎಷ್ಟೇ ಪ್ರಯತ್ನಿಸಿದರೂ ಅದು ಅನಿವಾರ್ಯ ಆಗಿರುವುದು ಬೇಸರ ಮೂಡಿಸಿದೆ ಎಂದರು.
ನಗರ ಪ್ರದೇಶದಲ್ಲಿರುವ ಆರಾಧ್ಯ ಸಮಾಜದವರು ಶಿಕ್ಷಣ ಹಾಗೂ ಉದ್ಯೋಗ ಪಡೆದಿದ್ದಾರೆ. ಆದರೆ, ಗ್ರಾಮಾಂತರದಲ್ಲಿ ಇನ್ನೂ ಶಿಕ್ಷಣದಿಂದ ವಂಚಿತರಾಗಿದ್ದಾರೆ. ಹೀಗಾಗಿ, ಗ್ರಾಮೀಣ ಭಾಗದ ಮಕ್ಕಳನ್ನು ಶೈಕ್ಷಣಿಕವಾಗಿ ಮುಂದೆ ತರಲು ಪ್ರಯತ್ನಿಸಬೇಕು. ಪರಸ್ಪರ ಅಸೂಯೆ, ಅಹಂಗಳನ್ನು ಬಿಟ್ಟು ಪರಸ್ಪರ ಬೆಳವಣಿಗೆಗೆ ಸಹಕರಿಸಬೇಕು ಎಂದು ಸಲಹೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.