ಮೈಸೂರು

ಸಚಿವ ರಾಮದಾಸ್ ವಿರುದ್ಧ ಪ್ರತಿಭಟನೆ

Published On :

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರಾಮದಾಸ್ ಅವರು ತಮ್ಮ ಆಸರೆ ಫೌಂಡೇಶನ್ ಮೂಲಕ ಸೀರೆ, ಶಾಲು ಮತ್ತು ಇನ್ನಿತರ ವಸ್ತುಗಳನ್ನು ಸಾರ್ವಜನಿಕರಿಗೆ ವಿತರಿಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಪ್ರತಿಭಟಿಸಿದರು. ವಿದ್ಯಾರಣ್ಯಪುರಂ ಸೂಯೇಜ್ ಫಾರಂ ರಸ್ತೆಯಲ್ಲಿರುವ ಬೆಸ್ತರ ಬ್ಲಾಕ್‌ನಲ್ಲಿ ರಾಮದಾಸ್ ಬೆಂಬಲಿಗ ಹಾಗೂ ಬಿಜೆಪಿ ಕೆ.ಆರ್. ಕ್ಷೇತ್ರದ ಅಧ್ಯಕ್ಷ ಸೋಮಸುಂದರ್ ಮತ್ತು ಇತರರು ಆಸರೆ ಫೌಂಡೇಶನ್ ವತಿಯಿಂದ ಸೀರೆ ಮತ್ತು ಶಾಲುಗಳನ್ನು ವಿತರಿಸುತ್ತಿದ್ದರು. ಈ ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿದ ಕಾಂಗ್ರೆಸ್ ಕಾರ್ಯಕರ್ತರು, ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಈ ರೀತಿ ಸೀರೆ, ಶಾಲು ವಿತರಿಸುತ್ತಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟಿಸಿದರು. ನಂತರ ಮಾಜಿ ಸಚಿವ ಪಿ.ಜಿ. ಆರ್. ಸಿಂಧ್ಯಾ 'ಸೊಲ್ಲಾಪುರ ಕನ್ನಡಿಗ' ಪತ್ರಿಕೆ ಬಿಡುಗಡೆ ಮಾಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.